ಶುದ್ಧಗಂಗಾ ಯೋಜನೆ: ಮಾಹಿತಿ ಕೈಪಿಡಿ ಬಿಡುಗಡೆ.

ಉಜಿರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಶುದ್ಧಗಂಗಾ ಯೋಜನೆಯಡಿಯಲ್ಲಿ ಹಮ್ಮಿಕೊಳ್ಳಲಾದ ಸುಸ್ಥಿರ ಶುದ್ಧ ಕುಡಿಯುವ ನೀರಿನ ಯೋಜನೆಯ ಮಾಹಿತಿ ಕೈಪಿಡಿಯನ್ನು ಧರ್ಮಸ್ಥಳದಲ್ಲಿ ಜು.17 ರಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ನಿರ್ದೇಶಕರಾದ ಬಿ. ಜಯರಾಮ ನೆಲ್ಲಿತ್ತಾಯ, ಕೇಶವ ಗೌಡ ಮತ್ತು ಲಕ್ಷ್ಮಣ ಎಂ. ಯೋಜನಾಧಿಕಾರಿ ಪ್ರವೀಣ್ ಕುಮಾರ್ ಮತ್ತು ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್ ಉಪಸ್ಥಿತರಿದ್ದರು. 2009 ರ ಅಕ್ಟೋಬರ್ 4 ರಂದು ಪ್ರಥಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುದ್ಧಗಂಗಾ ಸುಸ್ಥಿರ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಪ್ರಾರಂಭಿಸ ಲಾಯಿತು. ಪ್ರಸ್ತುತ ರಾಜ್ಯದ 17 ಜಿಲ್ಲೆಗಳಲ್ಲಿ 290 ಶುದ್ಧಗಂಗಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಜನರು ಶುದ್ಧಗಂಗಾ ನೀರು ಪಡೆಯುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.