ದೇಶವನ್ನು ವಿಶ್ವಗುರುವಾಗಿ ಮಾರ್ಪಡಿಸುವುದು ಧರ್ಮಸಂಸದ್‌ನ ಉದ್ದೇಶ: ಬ್ರಹ್ಮಾನಂದ ಶ್ರೀ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಸನಾತನ ಭಾರತದ ಭವ್ಯ ಪರಂಪರೆಯನ್ನು ಉಳಿಸುವ ಮೂಲಕ ನಮ್ಮ ಯುವ ಜನಾಂಗವನ್ನು ಶಕ್ತಿಯುತ, ಸಂಸ್ಕಾರಯುತ ಪ್ರಜೆಗಳಾಗಿ ರೂಪಿಸಿ ಈ ದೇಶವನ್ನು ವಿಶ್ವಗುರುವಾಗಿ ಮಾರ್ಪಡಿಸುವುದು ಧರ್ಮಸಂಸದ್‌ನ ಉದ್ದೇಶವಾಗಿದೆ ಎಂದು ಶ್ರೀರಾಮ ಕ್ಷೇತ್ರದ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನುಡಿದರು.
ಅವರು ಶ್ರೀ ಕ್ಷೇತ್ರದಲ್ಲಿ ಸೆ.3 ರಂದು ನಡೆಯಲಿರುವ ಧರ್ಮಸಂಸದ್‌ನ ಪೂರ್ವಭಾವಿಯಾಗಿ ಜು.23 ರಂದು ನಡೆದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಆಶೀರ್ವಚನ ನೀಡಿ, ಮುಂದಿನ ಜನಾಂಗಕ್ಕೆ ಮೌಲ್ಯಯುತ ಬದುಕು ನೀಡುವ ನಿಟ್ಟಿನಲ್ಲಿ ಮಕ್ಕಳಿಗೆ ಧರ್ಮ ಶಿಕ್ಷಣ ಅತೀ ಅಗತ್ಯ ಎಂದು ಅಭಿಪ್ರಾಯ ಪಟ್ಟರು.
ವೇದ, ಶಾಸ್ತ್ರಗಳು ನಮ್ಮ ಬದುಕಿನ ಸಂವಿಧಾನ, ನಮಗೆ ಆಹಾರ ಎಷ್ಟು ಮುಖ್ಯವೋ ಸನಾತನ ಧರ್ಮ ಕೂಡಾ ಅಷ್ಟೇ ಮುಖ್ಯ, ಸಮಾಜ ಬಲಿಷ್ಠವಾಗಬೇಕಾದರೆ ನಮ್ಮ ಮುಂದಿನ ಜನಾಂಗಕ್ಕೆ ಉತ್ತಮ ಧರ್ಮ ಶಿಕ್ಷಣ ದೊರೆಯಬೇಕು. ದೇಶದಲ್ಲಿ ಮುಂದಿನ ಹತ್ತು ವರ್ಷದೊಳಗೆ ಪ್ರತಿ ಹಳ್ಳಿಗಳಲ್ಲಿ ಅಂಗನವಾಡಿ ಮಾದರಿಯಲ್ಲಿ ಗುರುಕುಲಗಳ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ಉಜಿರೆ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ, ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ನ್ಯಾಯವಾದಿ ಪ್ರತಾಪಸಿಂಹ ನಾಯಕ್ ಮಾತನಾಡಿ ಧರ್ಮದ ಪುನರುತ್ಥಾನಕ್ಕಾಗಿ ನಡೆಯಲಿರುವ ಈ ಪುಣ್ಯ ಕಾರ್ಯದಲ್ಲಿ ಎಲ್ಲರೂ ತೊಡಗಿಸಿಕೊಂಡು ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಬಿಲ್ಲವ ಮಹಿಳಾ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜೀತಾ ವಿ. ಬಂಗೇರ, ಧರ್ಮಸ್ಥಳ ಉಗ್ರಾಣ ಮುತ್ಸದ್ಧಿ ಬಿ. ಭುಜಬಲಿ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಯ ತೋಳ್ಪಾಡಿತ್ತಾಯ, ಜಿ.ಪಂ. ಸದಸ್ಯ ಕೊರಗಪ್ಪ ನಾಯ್ಕ, ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಪಡಂಗಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಚಂದನ್ ಕಾiತ್, ಉದ್ಯಮಿ ರಮಾನಂದ ಸಾಲ್ಯಾನ್ ಬೆಳ್ತಂಗಡಿ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಬೆಳಾಲು, ತಾಲೂಕಿನ ವಿವಿಧ ಜಾತಿ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಭೆಯಲ್ಲಿ ಕಾರ್ಯಕ್ರಮದ ಯಶಸ್ವಿ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭ ರಾಷ್ಟ್ರೀಯ ಧರ್ಮ ಸಂಸದ್‌ನ ತಾಲೂಕು ಸಂಚಾಲಕ ಸಂಪತ್ ಸುವರ್ಣ ಸ್ವಾಗತಿಸಿದರು. ಪ್ರಧಾನ ಸಂಚಾಲಕ ಸತ್ಯಜಿತ್ ಸುರತ್ಕಲ್ ಪ್ರಸ್ತಾವನೆಗೈದರು. ಜಿಲ್ಲಾ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ತುಕರಾಮ ಸಾಲ್ಯಾನ್ ವಂದಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಧರ್ಮಸಂಸದ್ ಯಶಸ್ವಿಗಾಗಿ ತಾಲೂಕು ಸಮಿತಿಯನ್ನು ರಚಿಸಲಾಯಿತು.

ರ್ಮಸಂಸದ್‌ನಲ್ಲಿ ದೇಶದ ವಿವಿಧ ಭಾಗಗಳ ಸುಮಾರು ೨ ಸಾವಿರ ಸಾಧು, ಸಂತರು ಭಾಗವಹಿಸಲಿದ್ದಾರೆ. ಸನಾತನ ಹಿಂದೂ ಧರ್ಮದ ಬೇರೆ, ಬೇರೆ ಪರಂಪರೆಗಳ ಆಚಾರ್ಯರನ್ನು, ಮಹಾಮಂಡಲೇಶ್ವರರನ್ನು, ಮಹಂತರನ್ನು ಒಟ್ಟುಗೂಡಿಸಿ ಧರ್ಮರಕ್ಷಣೆಗಾಗಿ ರಾಷ್ಟ್ರಮಟ್ಟದಲ್ಲಿ `ರಾಷ್ಟ್ರೀಯ ಲೋಕ ಕಲ್ಯಾಣ ಮಂಚ್’ ಸ್ಥಾಪಿಸುವ ಗುರಿ ಹೊಂದಲಾಗಿದೆ ಈ ಮಹತ್ಕಾರ್ಯವನ್ನು ಎಲ್ಲರೂ ತಮ್ಮ ಮನೆಯ ಕಾರ್ಯಕ್ರಮ ಎಂದು ಭಾವಿಸಿ ಯಶಸ್ವಿಗೊಳಿಸುವಂತೆ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಕರೆ ನೀಡಿದ್ದಾರೆ.

ಶಾಸಕರ ನಿಧಿಯಿಂದ ರೂ.25 ಲಕ್ಷ : ಪೂಂಜಶಾಸಕ ಹರೀಶ್ ಪೂಂಜ ಮಾತನಾಡಿ ಶ್ರೀರಾಮ ಕ್ಷೇತ್ರದಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಐತಿಹಾಸಿಕ ದಾಖಲೆಯಾಗಲಿದೆ. ಇದರಲ್ಲಿ ಹಿಂದೂ ಸಂಘಟನೆಗಳು ಸಂಪೂರ್ಣ ತೊಡಗಿಸಿಕೊಳ್ಳಲಿದೆ ಎಂದು ಹೇಳಿ ಶಾಸಕರ ನಿಧಿಯಿಂದ ರೂ.25 ಲಕ್ಷ ಅನುದಾನ ನೀಡುವುದಾಗಿ ಭರವಸೆಯಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.