ಶ್ರೀರಾಮ ಕ್ಷೇತ್ರದಲ್ಲಿ ಗುರುಪೌರ್ಣಮಿ.

ಧರ್ಮಸ್ಥಳ: ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಗುರು ಪೌರ್ಣಮಿ ನಿಮಿತ್ತ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮಿಜಿಯವರಿಗೆ ಗುರುವಂದನೆ ಜು.27 ರಂದು ಕ್ಷೇತ್ರದಲ್ಲಿ ಜರುಗಿತು.
ಪೂಜಾ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮ ನಡೆದು, ಹಿರಿಯ ವಕೀಲರಾದ ಸುಬ್ರಹ್ಮಣ್ಯ ಅಗರ್ತರವರು ಗುರುಪೌರ್ಣಮಿಯ ಮಹತ್ವದ ಬಗ್ಗೆ ಮಾತನಾಡಿದರು. ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಕ್ಷೇತ್ರದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರುಗಳ ಆಶೀರ್ವಾದ ಪಡೆದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.