ಸಂತ ಅಂತೋನಿ ಪದವಿ ಕಾಲೇಜು ನಾರಾವಿ: NSS ಉದ್ಘಾಟನೆ.

ನಾರಾವಿ: ಸಂತ ಅಂತೋನಿ ಕಾಲೇಜು ನಾರಾವಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ 2018-19 ರ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಸಂತ ಅಂತೋನಿ ಕಾಲೇಜಿನ ಪ್ರಾಂಶುಪಾಲರಾದ ವಂ|ಸ್ವಾ| ಅರುಣ್ ವಿಲ್ಸನ್ ಲೋಬೊ ರವರು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿ, ವಿದ್ಯಾರ್ಥಿಗಳ ಜೀವನದಲ್ಲಿ NSS ನ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಾರಾವಿ ಉಪವಲಯ ಅರಣ್ಯಾಧಿಕಾರಿ ಅಜಿತ್ ಕುಮಾರ್ ರವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಂತರ ಕಳೆದ 4 ವರ್ಷಗಳಿಂದ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ದಿನೇಶ್ ಬಿ.ಕೆ. ರವರನ್ನು ಪ್ರಾಂಶುಪಾಲರು ಗೌರವಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಸಂತೋಷ್ ಸಲ್ಡಾನ್ಹಾ, ಕ್ಲಬ್ ಸಂಯೋಜಕಿ ಶ್ರೀಮತಿ ಚೈತ್ರಾ, ಯೋಜನಾಧಿಕಾರಿ ಅವಿಲ್ ಮೊರಾಸ್ ಮತ್ತು ಘಟಕ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಅವಿಲ್‌ ಮೊರಾಸ್ ಸ್ವಾಗತಿಸಿ,  NSS ವಿದ್ಯಾರ್ಥಿನಿ ಸೌಜನ್ಯ  ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.