25ನೇ ಮಕ್ಕಳ ಧ್ವನಿಯ ಸರ್ವಾಧ್ಯಕ್ಷೆಯಾಗಿ ಕು| ಪ್ರಜ್ಞಾ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಕು| ಪ್ರಜ್ಞಾ                         ಕು| ಅನನ್ಯಾ                      ಕು| ಪೂರ್ಣಿಮಾ

ಬೆಳ್ತಂಗಡಿ: ಉಡುಪಿ, ಹಾಗೂ ಕಾಸರಗೋಡು ಜಿಲ್ಲೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯಲ್ಲಿ ಇಪ್ಪತ್ತೈದನೇ ಮಕ್ಕಳ ಧ್ವನಿ ಕಾರ್ಯಕ್ರಮವು ಸೆ.8  ಮತ್ತು 9 ರಂದು ನಡೆಯಲಿದ್ದು, ಇದರ ಸರ್ವಾಧ್ಯಕ್ಷರಾಗಿ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಇವರು ಆಯ್ಕೆಯಾಗಿರುತ್ತಾರೆ.

ಕವಿಗೋಷ್ಠಿಯ ಅಧ್ಯಕ್ಷರಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕು|ಅನನ್ಯ ಹಾಗೂ ಕಥಾಗೋಷ್ಠಿಯ ಅಧ್ಯಕ್ಷರಾಗಿ ಇದೇ ಕಾಲೇಜಿನ ಕು| ಪೂರ್ಣಿಮಾ ಇವರು ಆಯ್ಕೆಯಾಗಿರುತ್ತಾರೆ. ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕವಿಗೋಷ್ಠಿ, ಕಥಾಗೋಷ್ಠಿ, ಅಭಿನಯ ಗೋಷ್ಠಿ ಹಾಗೂ ಉಡುಪಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಾಲೇಜುಗಳ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಲಿದೆ. ಅಲ್ಲದೆ ಈ  ಕಾರ್ಯಕ್ರಮವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳೇ ನಿರ್ವಹಿಸಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.