ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ

 

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಸಮಿತಿ ಬೆಳ್ತಂಗಡಿ, ತಾ.ಪಂ ಬೆಳ್ತಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳ್ತಂಗಡಿ ಹಾಗೂ ನಗರ ಪಂಚಾಯತ್ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭವು ಇಂದು (ಸೆ.5 ) ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು.
ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ದ.ಕ.ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಧರಣೇಂದ್ರ ಕುಮಾರ್, ಕೆ.ಕೆ ಸಾಹುಲ್ ಹಮೀದ್, ಶ್ರೀಮತಿ ಮಮತಾ ಎಂ ಶೆಟ್ಟಿ, ಶೇಖರ್ ಕುಕ್ಕೇಡಿ, ಸೌಮ್ಯಲತಾ ಜಯಂತ್ ಗೌಡ, ಶ್ರೀಮತಿ ನಮಿತಾ, ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ತಾ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್  ಗೌರವ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.