ಸಂಗಾತಿ ಎ.ಕೆ.ಜಿ.ಬೀ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಸಂಗಾತಿ ಎ.ಕೆ.ಜಿ.ಬೀ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವು ಇಂದು( ಸೆ.8 )ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರಿನಲ್ಲಿರುವ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ ವಸಂತ ಬಂಗೇರರವರು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ದ.ಕ ಸಹಕಾರಿ ಸಂಘಗಳ ಉಪ ನಿರ್ದೇಶಕ ಬಿ.ಕ ಸಲೀಂ, ಕಾರ್ಮಿಕ ಮುಂದಾಳು ವಸಂತ  ಆಚಾರಿ, ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಎಸ್ ಎಮ್, ಉಪಾಧ್ಯಕ್ಷ ವೆಂಕಟೇಶ ಮಯ್ಯ, ವ್ಯವಸ್ಥಾಪಕ ಪಿ.ಕೆ ಉಮೇಶ್ ಹಾಗೂ ಸಂಘದ ನಿರ್ದೇಶಕರುಗಳು ಭಾಗವಹಿಸಿದ್ದರು.

ಈ ಸಂಧರ್ಭದಲ್ಲಿ ಸ್ವಸಹಾಯ ಸಂಘಗಳಿಗೆ ಕಿಟ್ ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.