ಹ್ಯಾಮರ್ ಥ್ರೋ: ವೀಕ್ಷಾ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

ಗರ್ಡಾಡಿ: ಬ್ರಹ್ಮಾವರದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ಮಟ್ಟದ ಆತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೀಕ್ಷಾ ಶೆಟ್ಟಿ ಹ್ಯಾಮರ್ ಥ್ರೋ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದು ರಾಷ್ಟ್ರೀಯ ಮಟ್ಟದ ಆತ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮೂಡಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದು, ಪ್ರಸ್ತುತ ಆಳ್ವಾಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿ ವ್ಯಾಸಾಂಗ ಮಾಡುತ್ತಿದ್ದಾರೆ. ಕ್ರೀಡಾವಿಭಾಗದ ಕೋಟದಲ್ಲೇ ಇವರು ಇಲ್ಲಿ ಅವಕಾಶ ಪಡೆದುಕೊಂಡವರಾಗಿದ್ದಾರೆ.
ಇವರು ಗರ್ಡಾಡಿ ಗ್ರಾಮದ ಕೆಳಗಿನಪಡ್ತ್ರೆ ನಿವಾಸಿ ತಿಮ್ಮಯ ಶೆಟ್ಟಿ ಮತ್ತು ಸುಧಾ.ಟಿ ಶೆಟ್ಟಿ ದಂಪತಿಯ ಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.