ಬೆಳಾಲು 37ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಸಾರ್ವಜನಿಕ ಶೀ ಗಣೇಶೋತ್ಸವ ಸಮಿತಿ ಬೆಳಾಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆ ಬೆಳಾಲು ವಿಭಾಗದ ಸಹಕಾರದೊಂದಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಊರವರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.13 ರಮದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಜರುಗಿತು.
ಇದರ ಅಂಗವಾಗ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ವಹಿಸಿದ್ದರು. ಉಜಿರೆ ಶ್ರೀ ಧ.ಮಂ ಕಾಲೇಜಿನ ಉಪನ್ಯಾಸಕ ಮಹೇಶ್ ಕುಮಾರ್ ಶೆಟ್ಟಿ ಧಾರ್ಮಿಕ ಉಪನ್ಯಾಸ ನೀಡುತ್ತಾ, ಧಾರ್ಮಿಕ ಆಚರಣೆ ಪರಂಪರೆಗಳನ್ನು ಉಳಿಸಬೇಕಾದರೆ ಇಂತಹ ಸಾಮೂಹಿಕ ಸಂಘಟನೆಗಳಿಂದ ಸಾಧ್ಯ. ಸಂಘಟನೆಗಳ ಮೂಲಕ ಕಷ್ಟದಲ್ಲಿರುವವರಿಗೆ ಸಹಕಾರ ನೀಡುವುದೇ ಧರ್ಮ ಎಂದರು. ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಕೇಂದ್ರ ಕಛೇರಿಯ ಡಾಟ ಯೋಜನಾಧಿಕಾರಿ ಹರೀಶ್ ಕುಮಾರ್ ವಿ, ಬೆಳಾಲು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಶ್ರೀ ಧ.ಮಂ.ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು ಸ್ವಾಗತಿಸಿದರು. ಮಾಧವ ಗೌಡ ಓನಾಜೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಮಾಜಿ ಅಧ್ಯಕ್ಷ ಶಿವಪ್ರಸಾದ್.ಕೆ ಕಾರ್ಯಕ್ರಮ ನಿರೂಪಿಸಿ, ಸೇವಾಪ್ರತಿನಿಧಿ ಕು| ಆಶಾ ವಂದಿಸಿದರು. ಶ್ರೀ.ಕ್ಷೇತ್ರ ಧ.ಮಂ.ಗ್ರಾ ಯೋಜನೆಯ ಅಧ್ಯಕ್ಷರುಗಳಾದ ರತ್ನಾಕರ ಆಚಾರ್ಯ, ಎಸ್.ಯೋಗೀಶ್ ಗೌಡ, ಶಿವಪ್ಪ ಗೌಡ ಮತ್ತು ಒಕ್ಕೂಟದ ಸದಸ್ಯರುಗಳು ಹಾಜರಿದ್ದು, ಸಹಕರಿಸಿದರು.
ಬೆಳಿಗ್ಗೆ ಸ್ಥಳೀಯ ಪ್ರೌಢಶಾಲಾ ಮಕ್ಕಳಿಂದ, ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ, ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ, ಶ್ರೀ ಮಾಯಾ ಮಹೇಶ್ವರ, ಶ್ರೀ ಸುಬ್ರಹ್ಮಣ್ಯೇಶ್ವರ, ಶ್ರೀ ಅನಂತೇಶ್ವರ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆದು, ಮಹಾಪೂಜೆ ಬಳಿಕ, ವೈಭವದ ಶೋಭಾಯಾತ್ರೆಯೊಂದಿಗೆ ಮೂರ್ತಿಯ ವಿಸರ್ಜನೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.