ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಗಣೇಶ ಚತುರ್ಥಿ

Advt_NewsUnder_1
Advt_NewsUnder_1
Advt_NewsUnder_1

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಧಾರ್ಮಿಕ ಪೂಜಾ ಕಾರ್ಯಗಳು ನಡೆದವು. ಶ್ರೀ ದೇವರಿಗೆ 108 ಕಾಯಿ ಗಣಹೋಮ, ರಂಗಪೂಜಾ ಕಾರ್ಯಕ್ರಮಗಳು ನಡೆದು ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯೂ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರ ನೇತೃತ್ವದಲ್ಲಿ ಶ್ರೀದೇವರಿಗೆ ಪೂಜಾ ವಿಧಿ ವಿಧಾನಗಳು ನಡೆದವು .
ಇತ್ತೀಚೆಗಿನ ವರ್ಷಗಳನ್ನು ಗಣನೆಗೆ ತೆಗೆದುಕೊಂಡರೆ ಅತ್ಯಂತ ಹೆಚ್ಚು ಭಕ್ತಾದಿಗಳು ಶ್ರೀ ಕ್ಷೇತ್ರ ಸೌತಡ್ಕಕ್ಕೆ ಗಣೇಶ ಚತುರ್ಥಿಯಂದು ಆಗಮಿಸಿರುವುದು ದಾಖಲಾರ್ಹವಾಗಿದೆ. ಬೆಳಗ್ಗಿನ ಜಾವ 5 ಗಂಟೆಯಿಂದ ತೊಡಗಿ ಸಂಜೆ 5 ಗಂಟೆಯ ತನಕವೂ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ಸರತಿ ಸಾಲಿನಲ್ಲೇ ಕಂಡು ಬಂದಿರುವುದು
ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಭಕ್ತರ ಸಂಖ್ಯೆ ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಸೌತಡ್ಕ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.ಅಂದಾಜು 90 ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಬೆಳಗ್ಗಿನಿಂದ ಸಂಜೆ ತನಕ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿರುತ್ತಾರೆ. ಮಧ್ಯಾಹ್ನ ಅಂದಾಜು ಹತ್ತು ಸಾವಿರಕ್ಕೂ ಮಿಕ್ಕಿ ಜನರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿದ್ದರು. ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದರಿಂದ ಧರ್ಮಸ್ಥಳ ಪೋಲೀಸ್ ಠಾಣೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕರ ಠಾಣೆಯ ಸಿಬ್ಬಂದಿಗಳು ಕ್ಷೇತ್ರದಲ್ಲಿ ಉಪಸ್ಥಿತರಿದ್ದು ನಿಯಂತ್ರಿಸಿದರು.

ಶ್ರೀ ಕ್ಷೇತ್ರದ ಭಕ್ತಾದಿಗಳು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿದ್ದು, ಸಾಗರೋಪಾದಿಯಲ್ಲಿ ಬಂದ ಭಕ್ತ ಜನರನ್ನು ಶ್ರೀ ದೇವರ ದರ್ಶನ ಮಾಡಲು ಮತ್ತು ಪ್ರಸಾದ ಸ್ವೀಕರಿಸಲು ಶ್ರೀ ದೇವಳದ ಸಿಬ್ಬಂದಿಗಳ ಜೊತೆಗೆ ಸ್ಥಳೀಯ ಭಕ್ತರೂ ಪಾಲ್ಗೊಂಡಿದ್ದರು. ಶ್ರೀ ಸೌತಡ್ಕ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ, ಸದಸ್ಯರುಗಳಾದ ವಿಶ್ವನಾಥ ಕೊಲ್ಲಾಜೆ, ಪಿ. ವಿಶ್ವನಾಥ ಶೆಟ್ಟಿ, ಪ್ರಶಾಂತ ರೈ ಆರಂತಬೈಲು, ಅಣ್ಣಪ್ಪ ಗೌಡ ಕಾಶಿ, ಗಣೇಶ ಪಿ.ಕೆ., ಸೌಮ್ಯ ಕೆ., ಸಿನಿ ಗುರುದೇವನ್ ಮತ್ತು ಶ್ರೀ ಕ್ಷೇತ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮುಂತಾದವರು ಶ್ರೀ ಕ್ಷೇತ್ರದ ಸುವ್ಯವಸ್ಥೆಯ ಬಗ್ಗೆ ಕಾರ್ಯನಿರ್ವಹಿಸಿದರು. ನೆಲ್ಯಾಡಿಯ ಶಿವಳ್ಳಿ ಸಂಪದದ ಸದಸ್ಯರುಗಳು ಶ್ರೀ ದೇವರಿಗೆ ಗಣೇಶ ಚತುರ್ಥಿಯ ಹಿಂದಿನ ದಿನ ಹೂ ಅಲಂಕಾರ ಸೇವೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.