ಸೆ.23-30: ಭಜನಾ ತರಬೇತಿ ಕಮ್ಮಟ

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.23ರಿಂದ 30ರ ವರೆಗೆ 20ನೇ ವರ್ಷದ ಭಜನಾ ತರಬೇತಿ ಕಮ್ಮಟವು ಶ್ರೀ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ. ಧಾರವಾಡ ಮಣಕವಾಡ ಶ್ರೀ ಗುರು ಅನ್ನದಾನೀಶ್ವರರ ದೇವಮಂದಿರ ಮಠದ ಶ್ರೀ ಶ್ರೀ ಸಿದ್ಧರಾಮ ದೇವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಶ್ರೀಧಾಮ ಮಾಣಿಲ ಸೇವಾ ಪ್ರತಿಷ್ಠಾನದ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿರುವರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಉಪಾಧ್ಯಕ್ಷರು ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸೆ.30 ರಂದು ಭಜನೋತ್ಸವ ಹಾಗೂ ಭಜನಾ ತರಭೇತಿ ಕಮ್ಮಟದ ಸಮಾರೋಪ ನಡೆಯಲಿದೆ. ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ವಹಿಸುವರು. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಶಾಸಕ ಹರೀಶ್ ಪೂಂಜ, ಪ್ರಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಭಾಗವಹಿಸುವರು 300 ಭಜನಾ ತಂಡಗಳ 2000 ಭಜನಾಪಟುಗಳಿಂದ ಶೋಭಾಯಾತ್ರೆ, ನೃತ್ಯ ಭಜನೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.