ವಾಣಿ ಪದವಿ ಪೂರ್ವ ಕಾಲೇಜು: ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನವ ಭಾರತ ಸಂಕಲ್ಪದ ಅಡಿಯಲ್ಲಿ ಹಲವು ಯೋಜನೆಗಳು ಜಾರಿಗೆ ಬಂದಿದೆ, ಈ ಸಾಲಿನಲ್ಲಿ ಯುವ ಜನತೆಯನ್ನು ತಂತ್ರಜ್ಞಾನ ಯುಗಕ್ಕೆ ಪೂರಕವಾಗಿ ತಯಾರುಮಾಡುವ ಉದ್ದೇಶದಿಂದ ಅಟಲ್ ಇನ್‌ಕ್ಯೂಬೇಶನ್ ಸೆಂಟರ್ ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್‌ನ್ನು ಹಳೆಕೋಟೆ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸೆ.೨೨ ರಂದು ದೀಪ ಬೆಳಗಿಸಿ ಉದ್ಘಾಟಿಸಿದರು.
ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ದೇಶದಾದ್ಯಂತ ಸ್ಥಾಪಿಸಲಾಗುತ್ತಿದೆ. ಮಕ್ಕಳಲ್ಲಿ ಎಳೆಯ ವಯಸ್ಸಿನಲ್ಲೇ ಸಂಶೋಧನೆಯಲ್ಲಿ ಆಸಕ್ತಿ ಮೂಡಿಸುವುದು ಮತ್ತು ತಳ ಮಟ್ಟದಲ್ಲಿರುವ ತಾಂತ್ರಿಕ ಪ್ರತಿಭೆಗಳನ್ನು ಗುರುತಿಸುವುದು ಈ ಲ್ಯಾಬ್‌ನ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ. ಸೋಮೇಗೌಡ, ಗೌರವಾಧ್ಯಕ್ಷ ಹೆಚ್.ಪದ್ಮಗೌಡ, ಸಂಘದ ಮಾಜಿ ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿ ಮೋಹನ್ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನಾರಾಯಣ ಗೌಡ ಕೆ, ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ, ರಾಜ್‌ಗೋಪಾಲ್ ವೆಂಕಟ್ರಾಮಣ್, ಕೇಶವ ಕುಮಾರ್, ನಾರಾಯಣ ಗೌಡ ಕೊಳಂಬೆ, ಯುವ ವೇದಿಕೆ ಅಧ್ಯಕ್ಷ ಜಯಾನಂದ ಗೌಡ, ರಾಜೀವ ಗೌಡ, ಗಣೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಪ್ರಾಂಶುಪಾಲ ಯದುಪತಿ ಗೌಡ ಸ್ವಾಗತಿಸಿ, ಗುಣಶ್ರೀ ಕಾರ್ಯಕ್ರಮ ನಿರೂಪಿಸಿ, ವಿಷ್ಣುಪ್ರಕಾಶ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.