ನಾಳ: ಅರಣ್ಯ ಸಮಿತಿ ವಾರ್ಷಿಕ ಮಹಾಸಭೆ

ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ಪ್ರಾದೇಶಿಕ ಅರಣ್ಯವಿಭಾಗ, ಮಂಗಳೂರು ವೃತ್ತ ಬೆಳ್ತಂಗಡಿ ವಲಯ, ಶ್ರೀ ದುರ್ಗಾಪರಮೇಶ್ವರಿ ಗ್ರಾಮ ಅರಣ್ಯ ಸಮಿತಿ ನಾಳ ಇದರ 2017-2018 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.22 ರಂದು ನಾಳ ‘ಕ್ಷೀರ ಗಂಗಾ’ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ನಡೆಯಿತು.

ನಿವೃತ ಶಿಕ್ಷಕ ಪ್ರಭಾಕರ ಭಟ್, ನಾಳ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಅಧ್ಯಕ್ಷತೆಯನ್ನು ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್ ವಹಿಸಿದ್ದರು. ಬೆಳ್ತಂಗಡಿ ವಲಯದ ಅರಣ್ಯಾಧಿಕಾರಿ ಸುಬ್ಬಯ್ಯ, ಭಾರತೀಯ ಕಿಸಾನ್ ಸಂಘ ಜಿಲ್ಲಾ ಕಾರ್ಯ ದರ್ಶಿ ಸುಬ್ರಾಯ.ಬಿ.ಎಸ್ ಸಂಪನ್ಮೂಲ ವ್ಯಕ್ತಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದು, ಅರಣ್ಯಗಳಿಂದ ಸಿಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ , ಸದಸ್ಯರು ಹಾಗೂ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.