ಉತ್ಕೃಷ್ಟತಾ ಪಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಕೇಂದ್ರದ ಶಿಲಾನ್ಯಾಸ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಉತ್ಕೃಷ್ಟತಾ ಪಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಕೇಂದ್ರದ ಶಿಲಾನ್ಯಾಸ ಕಾರ್ಯಕ್ರಮವು ಇಂದು (ಸೆ.24) ಜರುಗಿತು.
ಭಾರತ ಸರ್ಕಾರದ ಆಯುಶ್ ಇಲಾಖೆ ಗೌರವಾನ್ವಿತ ಸಚಿವರಾದ ಶ್ರೀಪಾದ್ ಯೆಸ್ಸೊ ನಾಯ್ಕ್ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ| ಎಸ್ ಸಚ್ಚಿದಾನಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಬಿ ಯಶೋವರ್ಮ, ಉಪಾಧ್ಯಕ್ಷರಾದ ಡಿ.ಸುರೇಂದ್ರ ಕುಮಾರ್, ಪ್ರೊ| ಎಸ್. ಪ್ರಭಾಕರ್ ಗೌರವ ಉಪಸ್ಥಿತರಿದ್ದರು. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಉಜಿರೆ ಎಸ್.ಡಿ.ಎಂ.ಸಿ.ಎನ್.ವೈ.ಎಸ್ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.