ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಸುತ್ತು ಪೌಳಿಯ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಧಾರ್ಮಿಕ ಕ್ಷೇತ್ರಗಳಿಗೆ ಶ್ರದ್ಧಾ ಭಕ್ತಿಯಿಂದ ನಂಬಿಕೆಯಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಂದ ಆ ಕ್ಷೇತ್ರವು ಪವಿತ್ರವಾಗುತ್ತದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬೆಳಾಲಿನ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಸುತ್ತು ಪೌಳಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಿರ್ಮಾಣಗೊಳ್ಳುತ್ತಿರುವ ಈ ಕ್ಷೇತ್ರದ ಅಬಿವೃದ್ಧಿಗೆ ಸಂಪೂರ್ಣ ಸಹಕಾರ ಹಾಗೂ ಶಾಸಕರ ನಿಧಿಯಿಂದ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದರು.
ಸುತ್ತು ಪೌಳಿಯ ಶಿಲಾನ್ಯಾಸವನ್ನೂ ಹಿರಿಯರಾದ ಕ್ಷೇತ್ರದ ಡೊಂಬಯ್ಯ ಗೌಡ ಮತ್ತು ಶ್ರೀಮತಿ ಬಾಲಕ್ಕ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ವ್ಯವಸ್ಥಾಪಕ ಹರೀಶ್ ಆರಿಕೋಡಿ ವಹಿಸಿ ಮಾತನಾಡುತ್ತಾ ಕ್ಷೇತ್ರದಲ್ಲಿ ವಿದ್ಯಾಭ್ಯಾಸ, ವಸ್ತ್ರದಾನಕ್ಕೆ ಸಹಕರಿಸುತ್ತಾ ಇದ್ದು, ನಿರ್ಮಾಣಗೊಳ್ಳುತ್ತಿರುವ ಈ ಕಾಮಗಾರಿಗೆ ಭಕ್ತಾಧಿಗಳು ಸಹಕಾರ ನೀಡಿ ಪ್ರೋತ್ಸಾಹಿಸಬೇಕು ಎಂದರು.
ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ.ಸೋಮೆ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉಜಿರೆ ಗಣೇಶ್ ಫ್ಲವರ್‍ಸ್‌ನ ಶಿವಶಂಕರ ಕುಡ್ವ, ಬಂದಾರಿನ ಉದ್ಯಮಿ ಮೋನಪ್ಪ ಸಿರಿಯಾನ್, ಬೆಳಾಲು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮೀ, ಬೆಳಾಲು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥ ಗೌಡ ನೂಜಿಲ, ವಸಂತ ಗೌಡ ಆರಿಕೋಡಿ, ಬಂದಾರು ಗ್ರಾ.ಪಂ. ಅಧ್ಯಕ್ಷ ಉದಯ ಬಿ.ಕೆ, ಕೊಯ್ಯೂರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಶಿಕಲಾ ವಿ.ಎನ್, ಬೆಳಾಲು ಗ್ರಾ.ಪಂ. ಸದಸ್ಯರುಗಳಾದ ಸುರೇಂದ್ರ ಎಸ್, ಜಯಂತ ಗೌಡ, ಸತೀಶ್ ಎಳ್ಳುಗದ್ದೆ, ಕೊಯ್ಯೂರು ಗ್ರಾ.ಪಂ ಸದಸ್ಯೆ ಶಶಿಕಲಾ, ಪಡಂಗಡಿ ಗ್ರಾ.ಪಂ. ಸದಸ್ಯೆ ಸುನಂದಾ ಶೆಟ್ಟಿ, ಗೌರವ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಹಿರಿಯರಾದ ಗರ್ಡಾಡಿಯ ಮುತ್ತಣ್ಣ ಪೂಂಜ ಇವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಮೊದಲು ಆಶೋಕ ಭಟ್ ಕೊಯ್ಯೂರು ಇವರ ವೈಧಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ನೇರವೇರಿಸಿ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು,
ಕಾವ್ಯ ಮತ್ತು ಬಳಗದವರು ಪ್ರಾರ್ಥಿಸಿ, ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಗೌಡ ಸ್ವಾಗತಿಸಿ, ಉಜಿರೆಯ ಪ್ರಮೋದ್ ಗೌಡ ವಂದಿಸಿದರು. ದಿನೇಶ್ ಕೊಯ್ಯೂರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.