ಬಂದಾರು: ರೂ.50 ಲಕ್ಷದ ವಿವಿಧ ಕಾಮಗಾರಿಗಳ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಂದಾರು: ನವೀಕೃತಗೊಂಡಿರುವ ಪಂಚಾಯತ್ ಕಛೇರಿಯ ಉದ್ಘಾಟನೆ ಮತ್ತು ಉದ್ಯೋಗ ಖಾತರಿ ಯೋಜನೆಯ ಮೂಲಕ ನಿರ್ಮಾಣಗೊಂಡಿರುವ ಬಂದಾರು ಗ್ರಾಮದ ಕುಂಟಾಲಪಲ್ಕೆ ಮತ್ತು ಪೆರಾಲ್ದಕಟ್ಟೆ ಅಂಗನವಾಡಿ ಕೇಂದ್ರಗಳ ಮತ್ತು ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ, ಆಧಾರ್ ತಿದ್ದುಪಡಿ ಕೇಂದ್ರದ ಉದ್ಘಾಟನಾ ಸಮಾರಂಭ, ವಸತಿ ಯೋಜನೆಯ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ, ೯೪ಸಿ ಹಕ್ಕು ಪತ್ರ ವಿತರಣೆ, ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಇನ್ನಿತರ ವಿವಿಧ ಸವಲತ್ತುಗಳ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮವು ಇಂದು ( ಸೆ.27 ) ಬಂದಾರು ಗ್ರಾ.ಪಂ ಕಛೇರಿ ವಠಾರದಲ್ಲಿ ಜರುಗಿತು.
ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಗ್ರಾ.ಪಂ ಅಧ್ಯಕ್ಷ ಉದಯ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮರ್, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಇಳಂತಿಲ ಕ್ಷೇತ್ರದ ತಾ.ಪಂ ಸದಸ್ಯ ಕೃಷ್ಣಯ್ಯ ಆಚಾರ್ಯ, ಮಂಗಳೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತಹಶೀಲ್ದಾರ್ ಮದನ್‌ಮೋಹನ್ ಸಿ, ತಾಲೂಕು ವಕೀಲ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ, ಶ್ರೀ.ಧ.ಮಂ.ಗ್ರಾ.ಯೋ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಉಪಸ್ಥಿತರಿದ್ದರು.
ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಪ್ರಿಯಾ ಆಗ್ನೇಸ್, ಗ್ರಾ.ಪಂ ಉಪಾಧ್ಯಕ್ಷೆ ಚಂದ್ರಾವತಿ ಕೆ.ವೈ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಮೋಹನ್ ಬಂಗೇರ, ಗ್ರಾ.ಪಂ ಸರ್ವ ಸದಸ್ಯರು, ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.