ಸರಕಾರಿ ನೌಕರರ ಸಹಕಾರಿ ಸಂಘದ ಮಹಾಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸರಕಾರಿ ನೌಕರರ ಸಂಘದ ಸಭಾ ಭವನ ಏಕತಾ ಸೌಧದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಕೆ. ಜಯಕೀರ್ತಿ ಜೈನ್ ಅಧ್ಯಕ್ಷತೆ ವಹಿಸಿದ್ದು, ಸಂಘದ ಎಲ್ಲಾ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು. ಸಂಘವು ಕಳೆದ 9 ವರ್ಷಗಳಿಂದ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ತನ್ನ ವ್ಯವಹಾರದೊಂದಿಗೆ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಬಗ್ಗೆ ಅಭಿನಂದಿಸಲಾಯಿತು. ಬರುವ ವರ್ಷ ದಶಮಾನೋತ್ಸವ ಆಚರಣೆ ಮಾಡಲಿದ್ದು, ಪ್ರತಿ ತಿಂಗಳು ಸಾರ್ವಜನಿಕರಿಗೆ ಹಾಗೂ ಸರಕಾರಿ ನೌಕರರಿಗೆ ಅನುಕೂಲಕರವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪ್ರಾರಂಭಿಕ ಹಂತವಾಗಿ ಈ ದಿನ ಚಾಲನೆ ನೀಡಲಾಯಿತು.
ಕಳೆದ ಆರ್ಥಿಕ ವರ್ಷದಲ್ಲಿ ಸಂಘ ಹೊಂದಿದ ಲಾಭಾಂಶದಲ್ಲಿ ಸದಸ್ಯರಿಗೆ ಶೇ 20 ರಷ್ಟು ಡಿವಿಡೆಂಡ್ ನೀಡಲು ಮಹಾಸಭೆಯಲ್ಲಿ ಘೋಷಿಸಲಾಯಿತು. ಕಳೆದ 7 ವರ್ಷಗಳಿಂದ ಪ್ರತಿ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ತೇರ್ಗಡೆ ಹೊಂದಿ ದಾಖಲೆ ನಿರ್ಮಿಸಿದ ಸರಕಾರಿ ಪ್ರೌಢ ಶಾಲೆ ಗುರುವಾಯನಕೆರೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ ವರ್ಗದವರನ್ನು ಗೌರವಿಸಲಾಯಿತು. ಇತ್ತಿಚೇಗೆ ಮಳೆಗಾಲದಲ್ಲಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಪಂಡಿಜೆ ಶಾಲಾ ಬಾಲಕನನ್ನು ರಕ್ಷಿಸಿದ ಅವನ ಸಹಪಾಠಿ ಸುಜಯ ಎಂಬ ಬಾಲಕನನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.
ಕಳೆದ ಆರ್ಥಿಕ ವರ್ಷದಲ್ಲಿ ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ 30 ಜನರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.