ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ವತಿಯಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಕಾರದೊಂದಿಗೆ 150ನೇ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ `ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ’ ಕಾರ್ಯಕ್ರಮವು ಇಂದು (ಅ.2) ಗುರುವಾಯನಕೆರೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಜರುಗಿತು.
ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆವಹಿಸಿದ್ದರು. ಶಾಸಕ ಹರೀಶ್ ಪೂಂಜ ಉದ್ಘಾಟನೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಹೇಮಾವತಿ ವಿ ಹೆಗ್ಗಡೆ, ಮಾಣಿಲ ಶ್ರೀಧಾಮದ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಸಂಸದ ನಳಿನ್ಕುಮಾರ್ ಕಟೀಲ್, ವೇದಿಕೆ ರಾಜ್ಯಾಧ್ಯಕ್ಷ ಸತೀಶ್ ಹೊನ್ನವಳ್ಳಿ, ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್, ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಉಪಸ್ಥಿತರಿದ್ದರು. ಜಿಲ್ಲಾ ಯೋಜನಾ ನಿರ್ದೇಶಕ ಚಂದ್ರಶೇಖರ ನೆಲ್ಯಾಡಿ,ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಬೇಬಿ ಚೇರಿಯನ್,,ಕಾರ್ಯದರ್ಶಿ ವಿವೇಕ್ ವಿ. ಪಾಯಿಸ್ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ,ಜನಜಾಗೃತಿ ವೇದಿಕೆ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಮೇಲ್ವಿಚಾರಕ ರಾಜೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.