ಬೆಳ್ತಂಗಡಿ ಪಟ್ಟಣ ಪಂಚಾಯತ್ ಕ್ಷೇತ್ರಕ್ಕೆ ಅ.28 ರಂದು ಚುನಾವಣೆ

ಬೆಳ್ತಂಗಡಿ: ಸೆಪ್ಟೆಂಬರ್‌ಗೆ ಅವಧಿ ಮುಗಿದಿರುವ ಬೆಳ್ತಂಗಡಿ ಪಟ್ಟಣ ಪಂಚಾಯತಿಯ 11 ವಾರ್ಡುಗಳಿಗೆ ಅ.28 ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಅ.9 ರಂದು ಜಿಲ್ಲಾಧಿಕಾರಿ ಅಧಿಸೂಚನೆ. 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. 17 ರಂದು ನಾಮಪತ್ರ ಪರಿಶೀಲನೆ. 20 ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕೊನೇ ದಿನವಾಗಿದೆ. 28 ರಂದು ಮತದಾನ, 31 ರಂದು ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.
ಚುನಾವಣೆ ನಡೆಯುವ ಪಂಚಾಯತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅ.13 ರಿಂದ 31 ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.