ಗೇರುಕಟ್ಟೆಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ

ಗೇರುಕಟ್ಟೆ: ಕ್ಷೇತ್ರ ಶಿಕ್ಷಣಾಧಿಕಾಗಳ ಕಛೇರಿ ಬೆಳ್ತಂಗಡಿ, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ  ಗೇರುಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ  ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ 14 ಹಾಗೂ 17 ವಯೋಮಿತಿಯ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾ ಕೂಟವು ಇಂದು (ಅ.5) ಗೇರುಕಟ್ಟೆ  ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಜರುಗಿತು.
ಕ್ರೀಡಾಕೂಟವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಧ್ವಜಾರೋಹಣವನ್ನು ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ, ಜಿ.ಪಂ ಸದಸ್ಯೆ ಶ್ರೀಮತಿ ಮಮತಾ.ಎಂ ಶೆಟ್ಟಿ, ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ , ತಾ.ಪಂ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿಯನ್, ತಾ.ಪಂ ಸದಸ್ಯ ಪ್ರವೀಣ್ ಗೌಡ, ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಶ್ರೀಮತಿ ಅಸ್ಮಾ, ಗ್ರಾ.ಪಂ ಸದಸ್ಯರಾದ ದಿವಾಕರ ಮೆದಿನ, ಶ್ರೀಮತಿ ನಳಿನಿ, ಶ್ರೀಮತಿ ಪ್ರೇಮಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್ ಗುರುಪ್ರಸಾದ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಗಣೇಶ್ ಐತಾಳ್, ಸ.ಪ.ಪೂ .ಕಾಲೇಜು ಗೇರುಕಟ್ಟೆ ಪ್ರಾಂಶುಪಾಲರಾದ ಶ್ರೀಮತಿ ಪೂರ್ಣಿಮಾ, ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಮತ್ತಿತರ ಗಣ್ಯರು ಉಪಸ್ಥಿತರಿದ್ದು, ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉರುವಾಲು ಶಾಲೆಯ ಪಿ.ಇ.ಟಿ ಶಿಕ್ಷಕರ ಮೇಲೆ ಕೇಸು ದಾಖಲಾದ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಎಲ್ಲಾ ಪಿ.ಇ.ಟಿ ಶಿಕ್ಷಕರುಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಶಾಸಕರು ಅವರ ಜೊತೆ ಸೂಕ್ತ ಮಾತುಕತೆ ನಡೆಸಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ತೆಗೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.