HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ವಾಣಿ ಕಾಲೇಜು: ಎನ್.ಎಸ್.ಎಸ್ ಶಿಬಿರ ಉದ್ಘಾಟನೆ

ಪುದುವೆಟ್ಟು: ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಾಗು ಸಮಾಜದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರ ಮೂಲಕ ತಮ್ಮನ್ನು ಗುರುತಿಸಿಕೊಳ್ಳಲು ಸಾಧ್ಯ ಎಂದು  ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೊಳ್ಮನಾರು ಪುದುವೆಟ್ಟು ಇಲ್ಲಿ ಜರಗಿದ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಉತ್ಸಾಹದ ಚಿಲುಮೆಗಳಾಗಿ ಶಕ್ತಿಗಳಾಗಿ ಮೂಡಿ ಬರಲು, ಸಮಾಜದಲ್ಲಿ ಗುರುತಿಸಿ ನಾಯಕತ್ವಕ್ಕೆ ಪ್ಟುಯನ್ನು ನೀಡಲು ಎನ್.ಎಸ್.ಎಸ್ ಸಹಕಾರಿಯಾಗಿದೆ. ಸಾಂಸ್ಕೃತಿಕವಾದ ವಾತಾವರಣವನ್ನು ಸ್ಟೃಸುವುದರ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಕಾಣುವುದರೊಂದಿಗೆ ರಾಷ್ಟ್ರಪ್ರೇಮ, ರಾಷ್ಟ್ರೀಯ ಚಿಂತನೆಗೆ ಇದು ಪೂರಕವಾಗಿದೆ. ತರಗತಿಯಲ್ಲಿ ಸಿಗುವ ಶಿಕ್ಷಣದೊಂದಿಗೆ ಗ್ರಾಮೀಣ ಜನರ ಬದುಕು, ಶೈಲಿ ಮತ್ತು ಸಂಸ್ಕೃತಿಯ ಅಧ್ಯಯನ ಹಾಗು ಜೀವನಾನುಭವವನ್ನು ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ  ಜಿ ಸೋಮೇ ಗೌಡ ಅಧ್ಯಕ್ಷತೆ ವಹಿಸಿದ್ದರು. ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ನೀಲಮ್ಮ, ತಾ.ಪಂ ಸ್ಥಾಯಿಸಮಿತಿ ಅಧ್ಯಕ್ಷ ಸೆಬಾಸ್ಟಿಯನ್, ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾಧಿಕಾರಿ  ಶಶಿಧರ ಶೆಟ್ಟಿ, ವಾಣಿ ಶಿಕ್ಷಣ ಸಂಸ್ಥೆಗಳ ನಿಕಟಪೂರ್ವ ಅಧ್ಯಕ್ಷ  ಕುಶಾಲಪ್ಪ ಗೌಡ, ಪುದುವೆಟ್ಟು ಪಂಚಾಯತ್‌ನ ಪಿ.ಡಿ.ಒ ಆನಂದ ಪಾಟೀಲ್, ಧರ್ಮಸ್ಥಳ ಪ್ರಾಥಮಿಕ ಕೃಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ, ಉಪಾಧ್ಯಕ್ಷ ಶ್ರೀಪತಿ ಹೆಬ್ಬಾರ್, ಶಾಲಾ ಮುಖ್ಯೋಪಾಧ್ಯಯ  ವಸಂತ್ ಭಟ್, ಶಿಬಿರ ಅನುಷ್ಠಾನ ಸಮಿತಿಯ ಅಧ್ಯಕ್ಷ ದೇವಣ್ಣ ಗೌಡ ಮುಚ್ಚಾರು, ಕಾರ್ಯಧ್ಯಕ್ಷ ನಿತ್ಯಾನಂದ ಗೌಡ ಎಟ್ಯೋಡು, ಕಾರ್ಯದರ್ಶಿ ದೇವಣ್ಣ ಗೌಡ ಬೇರಿಕೆ, ಎನ್.ಎಸ್.ಎಸ್ ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ಮೀನಾಕ್ಷಿ, ಘಟಕ ನಾಯಕರಾದ ವೇಣುಗೋಪಾಲ ಶೆಟ್ಟಿ, ಕು. ತೇಜಶ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಸ್ವಾಗತಿಸಿದರು. ಪ್ರಾಂಶುಪಾಲ ಡಿ.ಯದುಪತಿ ಗೌಡ ಪ್ರಸ್ತಾವನೆಗೈದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ನಂದಕುಮಾರ್ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಅನುರಾಧ ಕೆ ರಾವ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.