ವೇಣೂರು ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭೆ

ವೇಣೂರು: ವೇಣೂರು ಶ್ರೀ ಶಾರದಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ದೇವಸ್ಥಾನದ ಸಭಾಂಗಣದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭದ ಧಾರ್ಮಿಕ ಸಭೆ ಜರುಗಿತು.
ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್, ಮೂಡಬಿದ್ರೆಯ ವಕೀಲ ನಾಗೇಶ್ ಶೆಟ್ಟಿ, ವೇಣೂರಿನ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್, ವೇಣೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ, ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಧನುಷ್ ಕೆ.ಎಸ್, ವೇಣೂರು ಪೊಲೀಸ್ ಠಾಣಾ ಸಿಬ್ಬಂದಿ ವಿಜಯ ಕುಮಾರ್ ರೈ, ಶಂಕರ್ ಎಸ್ ಸಂಕಲಿಕೆ, ಸಮಿತಿ ಪೂರ್ವಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ಶ್ರೀ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಅಶೋಕ ಪಾಣೂರು, ಕಾರ್ಯದರ್ಶಿ ಲೋಕಯ್ಯ ಪೂಜಾರಿ ಉಪಸ್ಥಿತರಿದ್ದರು.
ಸಾರ್ವಜನಿಕ ಶ್ರೀ ಶಾರದೋತ್ಸವದ ಸಮಿತಿ ಅಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ಕೊರಗಪ್ಪ .ಎಂ. ವಂದಿಸಿ, ಸಂತೋಷ್ ಕುಲಾಲ್ ಸಿದ್ಧಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಬಜಿರೆ ಶಾಲಾ ಮಕ್ಕಳಿದ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ರಾತ್ರಿ ವೈಭವದ ಶೋಭಾಯಾತ್ರೆಯೊಂದಿಗೆ ಶಾರದಾ ದೇವಿಯ ವಿಗ್ರಹವನ್ನು ವಿಸರ್ಜಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.