ಅ.24: ಸಿ.ಎಂ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ

 ಧರ್ಮಸ್ಥಳ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಯವರ 51ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಅ.24 ರಂದು ಧರ್ಮಸ್ಥಳದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ಅವರು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು 2.30 ಗಂಟೆಗೆ ಧರ್ಮಸ್ಥಳದ ವಸಂತಮಹಲ್ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ.
ನಂತರ ಶ್ರೀ ಕ್ಷೇತ್ರ ಧರ್ಮಸ್ಥಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಹಾಗೂ ಶ್ರೀ ಕ್ಷೇತ್ರದಲ್ಲಿ ನಿರ್ಮಿಸಲಾದ ಮಂಜೂಷಾ ವಸ್ತು ಸಂಗ್ರಹಾಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.