ಅ.24: ಧರ್ಮಸ್ಥಳದಲ್ಲಿ ಪಟ್ಟಾಭಿಷೇಕ ಸುವರ್ಣ ಸಂಭ್ರಮ

ಧರ್ಮಸ್ಥಳ: 1968 ಅಕ್ಟೋಬರ್ 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿ, 50 ವರ್ಷಗಳ ಸೇವೆಯನ್ನು ಪೂರೈಸಿರುವ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವವು ನಾಳೆ (ಅ.24 ) ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಲಿರುವುದು.
ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಗ್ಗಡೆಯವರನ್ನು ಅಭಿನಂದಿಸಲಿದ್ದಾರೆ. ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರು ಸುವರ್ಣ ಸಂಚಯ ಪುಸ್ತಕ ಮಾಲಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ದ.ಕ ಜಿಲ್ಲಾ ಉಸ್ತುವಾರಿ ಮತ್ತು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇ ಗೌಡ, ಖ್ಯಾತ ಇತಿಹಾಸ ತಜ್ಞ ಮತ್ತು ಬೆಂಗಳೂರು ಯುನೆಸ್ಕೊ ಫೆಲೋ ಡಾ| ಚೂಡಾಮಣಿ ನಂದಗೋಪಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.