ಏರಂಗಲ್ಲು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕುವೆಟ್ಟು: ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಳ್ತಂಗಡಿ , ದ.ಕ ಜಿಲ್ಲಾ ಪಂಚಾಯತ್, ಇಂಜಿನಿಯರಿಂಗ್ ಉಪ ವಿಭಾಗ ಬೆಳ್ತಂಗಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ, ಗ್ರಾ.ಪಂ. ಕುವೆಟ್ಟು ಇದರ ಸಹಯೋಗದಿಂದ ಏರಂಗಲ್ಲು ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಅ.21 ರಂದು ಜರುಗಿತು.
ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಶುಭ ಹಾರೈಸಿದರು. ಕುವೆಟ್ಟು ಗ್ರಾ.ಪಂ ಅಧ್ಯಕ್ಷ ಅಶೋಕ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕುವೆಟ್ಟು ಕ್ಷೇತ್ರದ ತಾ.ಪಂ ಸದಸ್ಯ ಗೋಪಿನಾಥ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಉಪ ನಿರ್ದೇಶಕ ಸುಂದರ ಪೂಜಾರಿ, ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಚಾಕೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ನಾಗವೇಣಿ, ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷೆ ಅಕ್ಷತಾ ಶೆಟ್ಟಿ, ಸದಸ್ಯರಾದ ಪಂಕಜವಲ್ಲಿ, ಗೋಪಾಲ ಎನ್, ದೀಪಾ ಪ್ರಕಾಶ್ ಶೆಣೈ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸುಧಾಶ್ರೀ, ಓಡಿಲ್ನಾಳ ಶಾಲಾ ಮುಖ್ಯೋಪಾಧ್ಯಾಯ ದತ್ತಾತ್ರೇಯ ಗೊಲ್ಲ, ಕಿರಿಯ ಆರೋಗ್ಯ ಸಹಾಯಕಿ ಕಮಲಾ ಬಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.
ಅಂಗನವಾಡಿ ಕೇಂದ್ರದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಹಾಗೂ ಜಗದೀಶ ಬಂಗೇರ ಕುವೆಟ್ಟು ಇವರು ನೆರವೇರಸಿದರು.
ಶಾಂತಾ.ಜೆ.ಬಂಗೇರ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಆಶಾಲತಾ ವರದಿ ವಾಚಿಸಿ, ಚಂದ್ರಪ್ಪ ಕಾರ್ಯಕ್ರಮ ನಿರೂಪಿಸಿ, ನಾಗವೇಣಿ ವಂದಿಸಿದರು. ಅಂಗನವಾಡಿ ಸಹಾಯಕಿ ಶೀಲಾವತಿ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.