ಡಾ. ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಗಣ್ಯರು-ಭಕ್ತರಿಂದ ಅಭಿನಂದನೆ ಸಲ್ಲಿಕೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಅಂಗವಾಗಿ ಧರ್ಮಸ್ಥಳದಲ್ಲಿ ಅ.24 ರಂದು ಹಬ್ಬದ ವಾತಾವರಣ. ಎಲ್ಲೆಲ್ಲೂ ಸಂಭ್ರಮ-ಸಡಗರ.
ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ, ನೆಲ್ಯಾಡಿ ಬೀಡು, ಹೆಗ್ಗಡೆಯವರ ಬೀಡು (ನಿವಾಸ) ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದಿಂದ ಅಲಂಕರಿಸಲಾಗಿದೆ. ದೇವಸ್ಥಾನದಲ್ಲಿ ಹಾಗೂ ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.
ಊರಿನ-ಪರವೂರಿನ ಭಕ್ತರು, ಅಭಿಮಾನಿಗಳು ಹಾಗೂ ಸಂಘ-ಸಂಸ್ಥೆಗಳ ನೌಕರರು ಹೆಗ್ಗಡೆಯವರಿಗೆ ಹಾರ ಹಾಕಿ, ಫಲ ಕಾಣಿಕೆ ಅರ್ಪಿಸಿ ಭಕ್ತಿ ಪೂರ್ವಕ ಗೌರವ ಸಲ್ಲಿಸಿದರು.
ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಏರ್ಯ ಲಕ್ಷ್ಮೀನಾರಾಯಣ ಆಳ್ವ, ಮಂಗಳೂರಿನ ಶೋಭಾಕರ ಬಳ್ಳಾಲ್, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಕೆ. ಪ್ರದೀಪ್ ಕುಮಾರ್ ಕಲ್ಕೂರ, ಡಾ. ಕೆ. ಚಿನ್ನಪ್ಪ ಗೌಡ, ಮಂಗಳೂರಿನ ಉದ್ಯಮಿ ಪುಷ್ಪರಾಜ್ ಜೈನ್, ಉಜಿರೆಯ ವಿಜಯರಾಘವ ಪಡ್ವೆಟ್ನಾಯ ಮತ್ತು ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಹೆಗ್ಗಡೆಯವರಿಗೆ ಗೌರವ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.