ಅ.27-28: ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಸಮ್ಮೇಳನ

ಉಜಿರೆ:  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರ್ಸ್ಸ್ (IEEE) ಸಂಸ್ಥೆಯ ಬೆಂಗಳೂರು ವಿಭಾಗದ ಸಹಯೋಗದೊಂದಿಗೆ ಅ.27 ಮತ್ತು 28 ರಂದು ಉಜಿರೆಯ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್‌ವರ್‌ಜೆನ್ಸ್ ಇನ್ ಟೆಕ್ನಾಲಜಿ (Convergence in Technology)  ಬಗ್ಗೆ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಹಾಗೂ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಅಶೋಕ್ ಕುಮಾರ್ ತಿಳಿಸಿದರು.
ಅವರು ಅ.25 ರಂದು ಕರೆಯಲಾದ ಪತ್ರಿಕಾಗೊಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಮ್ಮೇಳನದಲ್ಲಿ ಮಲೇಷ್ಯಾದ ಕೆಂಬನ್ಸನ್ ವಿಶ್ವವಿದ್ಯಾನಿಲಯದ ಡಾ|ರೋಸಿದ್ದೆನ್ ನೋದಿನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಸ್.ಡಿ.ಯಮ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಸಮ್ಮೇಳನದಲ್ಲಿ ಅತಿಥಿಗಳಾಗಿ ಡಾ| ಪುನೀತ್ ಮಿಶ್ರಾ, ಡಾ| ಅಬ್ರರ್, ಡಾ| ಬಿಂದು ಮಾಧವನ್, ಡಾ| ವಿನೀತ್ ಕೋಟಕ್, ಡಾ| ದತ್ತಾತ್ರೆಯ ಶಂಕರ್ ಬೊರಮನೆ, ಡಾ| ಚಾಣಾಕ್ಯ ಕುಮಾರ್ ಜಾ, ಹಾಗೂ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ.ಯಶೋವರ್ಮ ಸಮಾರಂಭದಲ್ಲಿ ಉಪಸಸ್ಥಿತರಿರುವರು. ಸಮ್ಮೇಳನದಲ್ಲಿ ದೇಶ-ವಿದೇಶಗಳಿಂದ 200 ಕ್ಕೂ ಅಧಿಕ ಸಂಶೋಧಕರು ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಿ ಚರ್ಚಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ಸಂಯೋಜಕ ಡಾ| ಬಸವ.ಟಿ, ಸತ್ಯನಾರಾಯಣ ಭಟ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.