ಪ್ರಸನ್ನ ಕಾಲೇಜಿನ ಐಟಿಐ ವಿಭಾಗದ ಪ್ರಾಂಶುಪಾಲ ಅನಂತರಾಮ ರಾವ್ ಅಕಾಲಿಕ ನಿಧನ

ಲಾಯಿಲ: ಇಲ್ಲಿನ ಪ್ರಸನ್ನ ಐಟಿಐ ಕಾಲೇಜಿನ ಪ್ರಾಂಶುಪಾಲರಾಗಿದ್ದ ಅನಂತರಾಮ ರಾವ್ (45ವ.) ಅಲ್ಪಕಾಲದ ಅಸೌಖ್ಯದಿಂದ ಅ. 27 ರಂದು ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
15 ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದದ್ದರಿಂದ ಅವರನ್ನು ಹೆಚ್ಚಿನ ಪರೀಕ್ಷೆಗೊಳಪಡಿಸಿದಾಗ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚನೆ ನೀಡಿದ್ದರು. ಅಂತೆಯೇ ಒಳರೋಗಿಯಾಗಿ ದಾಖಲಾಗಿದ್ದ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಯಿತಾದರೂ ಸ್ಪಂದಿಸದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಎಲ್ಲರ ಜೊತೆ ಆತ್ಮೀಯವಾಗಿ ಬೆರೆಯುತ್ತಾ ಸರ್ವರ ಪ್ರೀತಿಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಕೊಕ್ರಾಡಿಯ ಅವರ ನಿವಾಸಕ್ಕೆ ಸಂಜೆ ವೇಳೆಗೆ ತಂದು ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರ ಸಹೋದ್ಯೋಗಿಗಳು ಸುದ್ದಿಗೆ ಮಾಹಿತಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.