ಡಿ.2ರಿಂದ 7: ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವವು  ಡಿ.2 ರಿಂದ 7ರ ತನಕ ನಡೆಯಲಿದೆ. ಡಿ.2 ರಂದು ಸಂಜೆ 5.30 ಕ್ಕೆ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಆರಂಭಗೊಳ್ಳಲಿದೆ. ವಸ್ತು ಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು  ಜರುಗಲಿದೆ.

ಇಲ್ಲಿನ ಅಮೃತವರ್ಷಿನಿ ಸಭಾಭವನದಲ್ಲಿ  ಡಿ. 4 ರಿಂದ 6ರವರೆಗೆ ಲಲಿತಾ ಕಲಾಗೋಷ್ಟಿ, ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನಗಳು ನಡೆಯಲಿವೆ. ಪ್ರಸ್ತುತ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಿಂದ ಸಂಗೀತ, ಭರತನಾಟ್ಯ ಕಾರ್ಯಕ್ರಮಗಳು ಜರಗಲಿದೆ. ನಾಡಿನ ಗಣ್ಯರು, ಖ್ಯಾತ ಸಾಹಿತಿಗಳು, ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾಯದರ್ಶಿ ಡಾ| ಬಿ.ಯಶೋವರ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.