HomePage_Banner_
HomePage_Banner_

ಧರ್ಮಸ್ಥಳ ಲಕ್ಷದೀಪೋತ್ಸವ: ಪಾದಯಾತ್ರೆ ಬಗ್ಗೆ ಸಮಾಲೋಚನಾ ಸಭೆ

ಉಜಿರೆ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಡಿ.2 ರಂದು  ಪ್ರಾರಂಭವಾಗಲಿದ್ದು, ಆ ದಿನ ಸಂಜೆ ಗಂಟೆ ಮೂರಕ್ಕೆ ಉಜಿರೆ  ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಆರನೇ ವರ್ಷದ ಪಾದಯಾತ್ರೆ ನಡೆಯಲಿದೆ ಎಂದು ಪಾದಯಾತ್ರೆ ಸಮಿತಿಯ ಸಂಚಾಲಕ ಕೆ. ಪ್ರತಾಪ್‌ಸಿಂಹ ನಾಯಕ್ ಪ್ರಕಟಿಸಿದರು.
ಉಜಿರೆಯಲ್ಲಿ ಶ್ರೀ ರಾಮಕೃಷ್ಣ ಸಭಾ ಭವನದಲ್ಲಿ ಉಜಿರೆಯಿಂದ ಧರ್ಮಸ್ಥಳಕ್ಕೆ ಆರನೆ ವರ್ಷದ ಪಾದಯಾತ್ರೆ ಬಗ್ಗೆ ನ.10 ರಂದು ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಹನ್ನೊಂದು ವಲಯಗಳಲ್ಲಿ ಈಗಾಗಲೆ ವಲಯ ಸಮಿತಿ ಹಾಗೂ ಸಂಚಾಲಕರನ್ನು ಆಯ್ಕೆ ಮಾಡಲಾಗಿದೆ. ಡಿ. 2 ರಂದು ಸಂಜೆ ಮೂರು ಗಂಟೆಗೆ ಉಜಿರೆಯಿಂದ ಹೊರಟ ಪಾದಯಾತ್ರೆ ಸಂಜೆ 6 ಗಂಟೆಗೆ ಧರ್ಮಸ್ಥಳ ತಲುಪಲಿದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಪಾದಯಾತ್ರಿಗಳು ವ್ರತ-ನಿಯಮಗಳ ಪಾಲನೆಯೊಂದಿಗೆ ದುಶ್ಚಟ ಮುಕ್ತರಾಗುವ ದೃಢ ಸಂಕಲ್ಪ ಮಾಡಬೇಕು. ಉಜಿರೆಯಿಂದ ಧರ್ಮಸ್ಥಳದ ವರೆಗೆ ‘ಶೂನ್ಯ ಕಸ ವಲಯ’ ಮಾಡಿ ಧರ್ಮಸ್ಥಳಕ್ಕೆ ಬರುವ ಯಾತ್ರಿಕರಿಗೂ ಸ್ವಚ್ಛತೆ ಬಗ್ಯೆ ಜಾಗೃತಿ ಮೂಡಿಸಬೇಕು. ಅಲ್ಲಲ್ಲಿ ಫಲಕಗಳನ್ನು ಅಳವಡಿಸಬೇಕು ಎಂದು ಸಲಹೆ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಸಾಮೂಹಿಕವಾಗಿ ಶ್ರದ್ಧಾ-ಭಕ್ತಿಯಿಂದ ಪಾದಯಾತ್ರೆ ಮಾಡುವುದರಿಂದ ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ. ಅಲ್ಲದೆ ವಿಶೇಷ ಆನಂದ, ನೆಮ್ಮದಿ ಸಿಗುತ್ತದೆ. ಸ್ವಚ್ಛತೆ ಕಾಪಾಡುವ ಬಗ್ಯೆ ಉಜಿರೆಯಿಂದ ಧರ್ಮಸ್ಥಳದ ವರೆಗೆ ಶಾಶ್ವತ ಫಲಕಗಳನ್ನು ಹಾಕಬೇಕೆಂದು ಸಲಹೆ ನೀಡಿದರು.

ವಿಜಯರಾಘವ ಪಡ್ವೆಟ್ನಾಯ ಅಧ್ಯಕ್ಷತೆ ವಹಿಸಿದರು. ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ, ಉಡುಪಿ ಪ್ರಾದೇಶಿಕ ನಿರ್ದೇಶಕ ಕೆ. ಮಹಾವೀರ ಅಜ್ರಿ, ಬೇಬಿ ಚೆರಿಯನ್ ಉಪಸ್ಥಿತರಿದ್ದರು.
ಕೆ. ಮಂಜುನಾಥ್ ಕಾಮತ್ ಪ್ರಾರ್ಥಿಸಿ, ರವೀಂದ್ರ ಶೆಟ್ಟಿ ಬಳಂಜ ಕಾರ್ಯಕ್ರಮ ನಿರ್ವಹಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಕರ ಶೆಟ್ಟಿ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.