ಧರ್ಮಸ್ಥಳ: ಲಕ್ಷದೀಪೋತ್ಸವ ಮತ್ತು ಬಾಹುಬಲಿ ಸ್ವಾಮಿ ಮಹಾ ಮಸ್ತಕಾಭಿಷೇಕದ ಪೂರ್ವ ತಯಾರಿ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ-2018 ಮತ್ತು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾ ಮಸ್ತಕಾಭಿಷೇಕ-2019 ಬಗ್ಗೆ ಪೂರ್ವ ತಯಾರಿ ಸಭೆಯು ಧರ್ಮಸ್ಥಳದ ಸನ್ನಿಧಿಯಲ್ಲಿ ಇಂದು(ನ.20) ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್, ಶಾಸಕ ಹರೀಶ್ ಪೂಂಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವೀಕಾಂತೇ ಗೌಡ  ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್, ಎಸ್.ಪಿ ಡಾ. ರವಿಕಾಂತೇ ಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಸೆಲ್ವಮಣಿ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸಹಾಯಕ ಆಯುಕ್ತ ಕೃಷ್ಣಮೂರ್ತಿ, ಡಿವೈಎಸ್‌ಪಿ ಹೃಷಿಕೇಶ್, ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ ಅಧ್ಯಕ್ಷ ಕೇಶವ ಗೌಡ, ತಹಶೀಲ್ದಾರ್ ಮದನ್‌ಮೋಹನ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.