ವಾಣಿ ಪದವಿ ಪೂರ್ವ ಕಾಲೇಜು: ‘ಸಾಹಿತ್ಯ ರಚನಾ ಕಮ್ಮಟ’

ಬೆಳ್ತಂಗಡಿ: ಸಾಹಿತ್ಯದ ಅಭಿರುಚಿಗಳು ವ್ಯಕ್ತಿಯ ವೈಯಕ್ತಿಕ ಮೌಲ್ಯಗಳ ಬೆಳವಣಿಗೆಗೆ ಪೂರಕವಾಗಿದ್ದು, ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಾಗುತ್ತದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಮೋಹನ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ ನಡೆದ ‘ಸಾಹಿತ್ಯ ರಚನಾ ಕಮ್ಮಟ’ವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾಹಿತ್ಯದ ರಚನೆ ಅಥವಾ ಓದುವಿಕೆ ಮಾನಸಿಕ ನೆಮ್ಮದಿಯನ್ನು ನೀಡುತ್ತದೆ. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಕಾರಣವಾಗುತ್ತದೆ. ಪ್ರತಿಭಾವಂತರಿಗೆ ನಿರಂತರ ಪ್ರೋತ್ಸಾಹ ನೀಡುವುದು. ಶಿಕ್ಷಕ ಮತ್ತು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉದಯವಾಣಿ ಪತ್ರಿಕೆಯ ವರದಿಗಾರ ಕಿರಣ್ ಸರಪಾಡಿ ಮುಖ್ಯ ಅತಿಥಿಗಳಾಗಿದ್ದರು. ಕಳಸಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ನಾಗರಾಜ್ ರಾವ್ ಕಲ್ಕಟ್ಟೆ ಹಾಗೂ ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ|ಶ್ರೀಪತಿ ಹಳಗುಂದ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದು, ಕಮ್ಮಟವನ್ನು ನಡೆಸಿಕೊಟ್ಟರು.

ಕಾಲೇಜಿನ ಸಾಹಿತ್ಯ ಸಂಘದ ಸಂಯೋಜಕ  ಮಹಾಬಲ ಗೌಡ ಸ್ವಾಗತಿಸಿ, ಸಹಸಂಯೋಜಕಿ ಶ್ರೀಮತಿ ಕಿಶೋರಿ ಎಸ್.ರಾವ್ ವಂದಿಸಿ, ಉಪನ್ಯಾಸಕ  ಬೆಳಿಯಪ್ಪ.ಕೆ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.