ಮಲೆಕುಡಿಯ ಸಮುದಾಯದ ಕುಂದುಕೊರತೆ ಪರಿಶೀಲನೆ ಸಭೆ

ಬೆಳ್ತಂಗಡಿ: ಮಲೆಕುಡಿಯ ಸಮುದಾಯದ ಹಾಗೂ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಾಸಿಗಳ ಕುಂದುಕೊರತೆ ಪರಿಶೀಲನಾ ಸಭೆಯು ನ.23 ರಂದು ತಾಲೂಕು ಮಿನಿವಿಧಾನ ಸೌಧಕಛೇರಿಯಲ್ಲಿ ಜರುಗಿತು.
ತಹಶೀಲ್ದಾರ್ ಮದನ್‌ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ  ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹೆಚ್.ಎಂ ಪಾಟೀಲ್, ಐಟಿಡಿಪಿ ವಿಸ್ತರಣಾಧಿಕಾರಿ ಹೇಮಲತಾ, ವಲಯ ಅರಣ್ಯಾಧಿಕಾರಿ ಕಿರಣ್, ಮೆಸ್ಕಾಂ ಇಂಜಿನಿಯರ್ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿರಿದ್ದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಿಸುತ್ತಿರುವ ಮೂಲ ನಿವಾಸಿಗಳಿಗೆ ಮೂಲಸೌಲಭ್ಯಗಳನ್ನು ಒದಗಿಸುವಲ್ಲಿ ಇಲಾಖೆಗಳು ವಿಫಲವಾಗಿದೆ. ಯಾವುದೇ ಯೋಜನೆಗಳು ಬಂದರೂ ಅರಣ್ಯ ಇಲಾಖೆ ಅದಕ್ಕೆ ಅಡ್ಡಿಪಡಿಸುವ ಕಾರ್ಯವನ್ನು ಮಾಡುತ್ತಿದೆ. ಸಭೆಗಳು ನಡೆದರೂ ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಮಲೆಕುಡಿಯ ಸಮುದಾಯದ ಮುಖಂಡರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಇರುವ ಮೂರು ಪ್ರದೇಶಗಳಿಗೆ ವಿದ್ಯುತ್ ಸಂಪರ್ಕಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಇನ್ನೂ ಮಂಜೂರಾತಿ ದೊರೆತಿಲ್ಲ . ಉದ್ಯಾನವನ ದೊಳಗೆ ಹಾಗೂ ಅರಣ್ಯಕ್ಕೆ ತಾಗಿಕೊಂಡಿರುವ ಇತರೆಡೆಗಳಲ್ಲಿ ಜಮೀನಿನ ಬಗ್ಗೆ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಡುವೆ ಗೊಂದಲವಿದ್ದು, ಇದರಿಂದಾಗಿ ಮೂಲನಿವಾಸಿಗಳಿಗೆ ಜಮೀನು ಮಂಜೂರಾಗುತ್ತಿಲ್ಲ ಎಂದು ನೆರೆದಿದ್ದ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದರು.
ಸಮಸ್ಯೆಗಳಿಗೆ ಪ್ರತಿಕ್ರಿಯಿಸದ ತಹಶೀಲ್ದಾರರು ಸಮಾಜ ಕಲ್ಯಾಣ ಹಾಗೂ ಐಟಿಡಿಪಿ ಅಧಿಕಾರಿಗಳು ಮೂಲನಿವಾಸಿಗಳು ವಾಸಿಸುತ್ತಿರುವ ಪ್ರದೇಶಗಳಿಗೆ ತೆರಳಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು. ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.