ಗುರುವಾಯನಕೆರೆ: ‘ಅಭ್ಯಾಸವರ್ಗ’ ಕಾರ್ಯಕ್ರಮ ಉದ್ಘಾಟನೆ

ಬೆಳ್ತಂಗಡಿ ತಾಲೂಕು ಸಹಕಾರ ಭಾರತಿ ವತಿಯಿಂದ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳಿಗೆ ಅಭ್ಯಾಸ ವರ್ಗ ಕಾರ್ಯಕ್ರಮವು ನ.24 ರಂದು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಸಹಕಾರ ಭಾರತಿ ಅಧ್ಯಕ್ಷ ಸುಂದರ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೃಷ್ಣ ಪ್ರಸಾದ್, ಮಂಗಳೂರು ಸಹಕಾರ ಭಾರತಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ಯ, ಮೋಹನ್ ಕಾಂಬ್ಳೇಕರ್, ದ.ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಶ್ರೀಮತಿ ವೀಣಾ ಆರ್. ರೈ ಉಪಸ್ಥಿತರಿದ್ದರು. ಸುಂದರ ಹೆಗ್ಡೆ ಸ್ವಾಗತಿಸಿ, ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.