ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ :  ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ಶ್ರೀಮತಿ ಸೌಮ್ಯಲತಾ ಎನ್ ಸಂತೋಷ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ.  ಇವರು 2018ರ ವಿಧಾನ ಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದರು.

 ಸೌಮ್ಯಲತಾ ರವರು ಪ್ರಸ್ತುತ  ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಉಡುಪಿ ಉಪ ವಿಭಾಗದಿಂದ, ಬೆಳ್ತಂಗಡಿ ವಲಯ ಅಬಕಾರಿ ನಿರೀಕ್ಷಕರಾಗಿ ವರ್ಗಾವಣೆಗೊಂಡು, ಬೆಳ್ತಂಗಡಿ ಅಬಕಾರಿ ಇನ್ಸ್ ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಈ ಹಿಂದೆ ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿದ್ದ ಸಂದರ್ಭದಲ್ಲಿ ಅಬಕಾರಿ ಅಕ್ರಮಗಳಿಗೆ ಕಡಿವಾಣ ಹಾಕುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.