ಮಾಲಾಡಿ: ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ

ಮಾಲಾಡಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಿಜೆಪಿ ಮಾಲಾಡಿ ಗ್ರಾಮ ಸಮಿತಿ ವತಿಯಿಂದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ ಭಾಗವಹಿಸಿ, ಫಲಾನುಭವಿಗಳಿಗೆ ಗ್ಯಾಸ್ ವಿತರಿಸಿದರು. ಈ ಸಂದರ್ಭದಲ್ಲಿ ತಾ.ಪಂ ಸದಸ್ಯ ಜೋಯೆಲ್ ಮೆಂಡೋನ್ಸಾ, ಮಾಲಾಡಿ ಗ್ರಾ.ಪಂ ಸದಸ್ಯರಾದ ಅರವಿಂದ ಜೈನ್, ಕೃಷ್ಣ ಶೆಟ್ಟಿ ಸೋಣಂದೂರು, ವಿಜಯ ಸಾಲ್ಯಾನ್, ವೇದಾವತಿ, ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.