HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

ಬೆಳ್ತಂಗಡಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿರುವ ಹಿನ್ನಲೆಯಲ್ಲಿ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ನಂತರ ಮಾತನಾಡಿದ ವಸಂತ ಬಂಗೇರರು ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಕಿತ್ತೊಗೆದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಮತದಾರರು ಮೋದಿಯನ್ನು ಕಿತ್ತೊಗೆಯಲಿದ್ದಾರೆ. ಇನ್ನು ಮುಂದೆ ಮೋದಿ ನಡೆಯುವುದಿಲ್ಲ. ಕಾಂಗ್ರೆಸ್ ಮುಕ್ತ ದೇಶಕ್ಕಾಗಿ ಮೋದಿ ಕರೆ ನೀಡಿದ್ದರು. ದೇಶದ ಜನರು ಬಿಜೆಪಿ ಮುಕ್ತ ದೇಶಕ್ಕಾಗಿ ಈಗ ಚಾಲನೆ ನೀಡಿದ್ದಾರೆ ಎಂದರು. ಪ್ರಧಾನಿ ಮೋದಿ ಹಾಗೂ ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ಮಂಕು, ಮರುಳು ಮಾಡಿ ಅಧಿಕಾರಕ್ಕೆ ಬಂದು, ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಸಾಧನೆ ಮಾಡಿಲ್ಲ. ಇವರ ಮಾದರಿಯನ್ನೇ ಬೆಳ್ತಂಗಡಿ ಶಾಸಕರು ಅನುಸರಿಸುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ಗಾಂಧಿ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭ ಮಾಜಿ ಜಿ.ಪಂ ಸದಸ್ಯ ಸುಂದರ ಗೌಡ ಇಚ್ಚಿಲ, ಜಿ.ಪಂ ಸದಸ್ಯ ಶೇಖರ ಕುಕ್ಕೇಡಿ, ನ.ಪಂ ಸದಸ್ಯ ಜಗದೀಶ್ ಡಿ. ಮಡಂತ್ಯಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್‌ರಹಿಮಾನ್ ಪಡ್ಪು, ಅಲ್ಪಸಂಖ್ಯಾತ ನಗರ ಬ್ಲಾಕ್ ಅಧ್ಯಕ್ಷ ಆಶ್ರಫ್ ನೆರಿಯ, ಚಂದು ಎಲ್, ವಸಂತ ಬಿ.ಕೆ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷ ಯು.ಕೆ ಮಹಮ್ಮದ್ ಹನೀಫ್, ನಾಗರಾಜ್ ಲಾಲ, ನ್ಯಾಯವಾದಿ ಮನೋಹರ ಇಳಂತಿಲ, ಮಾಜಿ ತಾಪಸ ವಿನ್ಸೆಂಟ್ ಡಿ ಸೋಜ, ಖಾಲಿದ್ ಕಕ್ಕೇನ, ಶ್ರೀನಿವಾಸ ಗಾಂಧಿನಗರ, ಅನುಫ್‌ಪಾಯಸ್ ವೇಣೂರು, ಅಜೇಯ್ ಎ.ಜೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.