HomePage_Banner_
HomePage_Banner_
HomePage_Banner_

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಕೃಷ್ಣ ಶೆಟ್ಟಿ ರಾಷ್ಟ್ರಮಟ್ಟಕ್ಕೆ

ಬೆಳ್ತಂಗಡಿ : ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ 29ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಎ. ಕೃಷ್ಣ ಶೆಟ್ಟಿ ತಾರೆಮಾರು ಇವರು 70 ಕೆ.ಜಿ ಮೇಲ್ಪಟ್ಟ ಕುಮಿತಾ ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಲಯನ್ ಎ.ಕೃಷ್ಣ ಶೆಟ್ಟಿ ತಾರೆಮಾರು ಇವರು ಬೆಳ್ತಂಗಡಿ ತಾ| ಮಚ್ಚಿನ ಗ್ರಾಮದ ವಿಠಲ ಶೆಟ್ಟಿ ತಾರೆಮಾರು ಮತ್ತು ಸುಂದರಿ ಶೆಟ್ಟಿ ದಂಪತಿಯ ಪುತ್ರರಾಗಿದ್ದು, ಮಂಗಳೂರಿನ ಖ್ಯಾತ ಕ್ರೀಡಾ ಪೋಷಕ, ಶ್ರೀ ದೇವಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎ. ಸದಾನಂದ ಶೆಟ್ಟಿಯವರ ಮಾರ್ಗದರ್ಶನದಲ್ಲಿ ವಿವಿಧ ಸಂಘನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.