ಎಸ್.ಡಿ.ಎಂ ಪಾಲಿಟೆಕ್ನಿಕ್‌ ನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಉಜಿರೆ: ವಿದ್ಯಾರ್ಥಿ ಜೀವನದಲ್ಲಿಯೇ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವ ಅವಕಾಶ ಸಿಗುವುದರಿಂದ ತಮ್ಮ ಮುಂದಿನ ಬದುಕಿಗೆ ಬೇಕಾದ ಎಲ್ಲಾ ಬಗೆಯ ಶಿಕ್ಷಣವೂ ಈ ಶಿಬಿರಗಳಿಂದ ದೊರೆಯುವುದರಿಂದ ವಿದ್ಯಾರ್ಥಿಗಳ ಪಾಲಿಗೆ ಇದೊಂದು ರೀತಿಯಲ್ಲಿ ಪ್ರಯೋಗ ಶಾಲೆಯಿದ್ದಂತೆ ಎಂದು ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ್ ನುಡಿದರು.
ಅವರು ಇತ್ತೀಚೆಗೆ ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್‌ನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತದ ಬಹುಪಾಲು ಜನಸಂಖ್ಯೆ ಯುವಶಕ್ತಿಯನ್ನು ಒಳಗೊಂಡಿದ್ದು, ಭವಿಷ್ಯದಲ್ಲಿ ಭಾರತವನ್ನು ವಿಶ್ವಗುರುವಾಗಿಸುವ ಹೊಣೆ ಈ ಯುವಶಕ್ತಿಯ ಮೇಲಿದೆ. ಈ ನಿಟ್ಟಿನಲ್ಲಿ ಯುವಕರನ್ನು ತರಬೇತುಗೊಳಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳ ಪಾತ್ರ ಮಹತ್ತರವಾದುದು ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಕೆ. ಪಿ. ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶಾರದಾ,  ತಾ.ಪಂ ಸದಸ್ಯೆ ಸುಶೀಲ, ಕಾಯರ್ತಡ್ಕ ಜುಮ್ಮಾ ಮಸೀದಿಯ ಅಧ್ಯಕ್ಷ ಅಬ್ದುಲ್ಲಾ, ಬೆಳ್ತಂಗಡಿ ತಾ.ಪಂನ ಮಾಜಿ ಅಧ್ಯಕ್ಷ ವಿಜಯ ಕುಮಾರ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಜೀತ್ ಜೈನ್, ಶಾಲಾ ಮುಖ್ಯೋಪಾಧ್ಯಾಯ ನಾಗರಾಜ ನಾಯ್ಕ್ ಮಾತನಾಡಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು. ಶಿಬಿರಾಧಿಕಾರಿಗಳಾದ ಅವನೀಶ್ ಮತ್ತು ಕಿಶೋರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.