ವಿವಿಧ ದಾಸೋಹ ಇರುವ ದೇವಾಲಯಗಳಿಗೆ ಕಟ್ಟುನಿಟ್ಟಿನ ಸೂಚನೆ

ಬೆಳ್ತಂಗಡಿ: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಅಧಿಸೂಚಿತ ಸಂಸ್ಥೆಗಳಲ್ಲಿ ದೇವರ ನೈವೇದ್ಯಕ್ಕಾಗಿ ಮತ್ತು ದಾಸೋಹಕ್ಕಾಗಿ ಇರುವ ಅಡುಗೆ ಕೋಣೆಗೆ ಕಡ್ಡಾಯವಾಗಿ ಸಿ.ಸಿ.ಟಿವಿ ಅಳವಡಿಸಬೇಕು ಮತ್ತು ಇತರೆ ಪ್ರಮುಖ ನಿರ್ದೇಶನಗಳನ್ನು ನೀಡಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ದೇವಾಲಯದಲ್ಲಿ ನಡೆದಿರುವ ಪ್ರಸಾದದಲ್ಲಿ ವಿಷ ಪ್ರಕರಣವನ್ನು ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.
ಇಲಾಖಾ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ಸಂಸ್ಥೆಗಳಲ್ಲಿ ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಅನ್ನದಾಸೋಹ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಅನ್ನದಾಸೋಹ ವ್ಯವಸ್ಥೆ ಇರುವ ಕಡೆಗಳಲ್ಲಿ ತೆಗೆದುಕೊಳ್ಳಬೇಕಾಗಿರುವ ಕ್ರಮದ ಕುರಿತು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಇತರ 20 ಅಂಶಗಳೂ ಸೇರಿದಂತೆ ಈಗಿನ ಉಲ್ಲೇಖವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.