ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಭಾವೈಕ್ಯ ಶಿಬಿರ ಉದ್ಘಾಟನೆ

ಉಜಿರೆ: ಯುವಜನ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಕೋಶ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜು ಉಜಿರೆ ಇದರ ಸಹಯೋಗದಲ್ಲಿ ಡಿ.28 ರಿಂದ ಜ.3 ರವರೆಗೆ 7 ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಡಿ.28 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿ.ವಿ ಹಣಕಾಸು ಅಧಿಕಾರಿ ಪ್ರೊ| ದಯಾನಂದ ನಾಯಕ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ ಎನ್.ಎಸ್.ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ| ವಿನೀತಾ ರೈ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರಾದ ಪ್ರೊ| ಟಿ.ಎನ್.ಕೇಶವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮಾಧಿಕಾರಿ ಗಣೇಶ್ ಶೆಂಡ್ಯೆ ಸ್ವಾಗತಿಸಿ, ಪ್ರಸ್ತಾವಣೆಗೈದರು. ಡಾ| ಬಿ.ಎ ಕುಮಾರ ಹೆಗ್ಡೆ ಹಾಗೂ ಆಶಾಕಿರಣ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.