ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸುವ ಸರಕಾರಿ ಆದೇಶದನ್ವಯ ಪ್ರಸ್ತುತ ಚಾರ್ಮಾಡಿ ಗ್ರಾ.ಪಂ ಪಿಡಿಒ ಆಗಿರುವ ಪ್ರಕಾಶ್ ಶೆಟ್ಟಿ ನೊಚ್ಚ ಅವರ ಸೇವಾಸಾಧನೆಯ ಗುರುತಿಸಿ ಈ ಬಾರಿಯ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾಪ್ರಶಸ್ತಿಗೆ ಆಯ್ಕೆಗೊಳಿಸಲಾಗಿದೆ.
ಜ. 26 ರಂದು ಜಿಲ್ಲಾಡಳಿತದಿಂದ ಮಂಗಳೂರು ನೆಹರು ಮೈದಾನದಲ್ಲಿ ಜರುಗುವ ಗಣರಾಜ್ಯೋತ್ಸವ ಆಚರಣೆ ಸಂದರ್ಭ ಅವರಿಗೆ ಈ ಪ್ರಶಸ್ತಿ ಪ್ರದಾನ ನಡೆಯಲಿದೆ. ಕ್ರಿಯಾಶೀಲ ಸಂಘಟಕರಾಗಿರುವ ಪ್ರಕಾಶ್ ಶೆಟ್ಟಿಯವರು ಈಗಾಗಲೇ ಸೇವೆ ಸಲ್ಲಿಸಿರುವ ಮಡಂತ್ಯಾರು, ಲಾಯಿಲ, ಚಾರ್ಮಾಡಿ ಮತ್ತು ಉಜಿರೆ ಗ್ರಾ. ಪಂಚಾಯತ್‌ಗಳಲ್ಲಿ ಅತ್ಯುತ್ತಮ ರೀತಿಯಲ್ಲಿ ಸರಕಾರಿ ಸೇವೆ ಅನುಷ್ಠಾನ ಮತ್ತು ಜನಸ್ಪಂದನದ ಮೂಲಕ ಉತ್ತಮ ಅಧಿಕಾರಿಯೆಂದು ಗುರುತಿಸಿಕೊಂಡಿದ್ದಾರೆ. ಈ ಎಲ್ಲಾ ಪಂಚಾಯತ್‌ಗಳಿಗೆ ಪ್ರಶಸ್ತಿ ಕೂಡ ಬಂದಿದೆ. ಲಾಯಿಲ ಗ್ರಾಮ ಪಂಚಾಯತ್ ಪಿಡಿಒ ಆಗಿರುವ ವೇಳೆ ಅವರು ಸಲ್ಲಿಸಿರುವ ಅತ್ಯಪೂರ್ವ ಸೇವೆ ಈ ಪ್ರಶಸ್ತಿಯ ಆಯ್ಕೆಯಲ್ಲಿ ಅವರಿಗೆ ಅತೀ ಹೆಚ್ಚಿನ ಅರ್ಹತೆ ತಂದಿತ್ತು.
ಪಿಡಿಒಗಳ ಸಂಘದ ಜಿಲ್ಲಾಧ್ಯಕ್ಷರಾಗಿರುವ ಪ್ರಕಾಶ್ ಶೆಟ್ಟಿಯವರು ಉತ್ತಮ ವಾಗ್ಮಿ ಮತ್ತು ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಲಯನ್ಸ್ ಕ್ಲಬ್ ರಾಜ್ಯಪಾಲರ ಸಂಪುಟದ ಸದಸ್ಯರಾಗಿರುವ ಅವರು ಶ್ರೀದುರ್ಗಾ ಪರಮೇಶ್ವರೀ ಯಕ್ಷಗಾನ ಬಯಲಾಟ ಸಮಿತಿ ಅಳದಂಗಡಿ ಇದರ 25ನೇ ವರ್ಷದ ಸಂಚಾಲಕರಾಗಿ, ಸಹಿತ ವಿವಿಧ ಸಾಮಾಜಿಕ ಧಾರ್ಮಿಕ ಸಂಘಸಂಸ್ಥೆಗಳಲ್ಲಿ ತಮ್ಮನ್ನು ಪೂರ್ಣವಾಗಿ ತೊಡಿಗಿಸಿಕೊಂಡವರಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.