HomePage_Banner_
HomePage_Banner_
HomePage_Banner_

ಮೇ 1 : ಧರ್ಮಸ್ಥಳದಲ್ಲಿ 48ನೇ ವರ್ಷದ ಉಚಿತ ಸಾಮೂಹಿಕ ವಿವಾಹ  

Advt_NewsUnder_1

ಧರ್ಮಸ್ಥಳ: ಶ್ರೀ  ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1ರಂದು  6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ48ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಲ ಸೂತ್ರವನ್ನು ನೀಡಲಾಗುವುದು. ಯಾವುದೇ ಸಂದರ್ಭದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೆ ಭರಿಸಲಾಗುವುದು.
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ:9663464648, 08256-277144

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.