HomePage_Banner_
HomePage_Banner_
HomePage_Banner_

ಸುಂದರ ಪೂಜಾರಿಯವರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬೆಳ್ತಂಗಡಿಯವರಾದ ಸುಂದರ ಪೂಜಾರಿಯವರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯಿಂದ ಪುರಸ್ಕೃತರಾಗಿದ್ದಾರೆ.
ಗಣರಾಜೋತ್ಸವದ ಅಂಗವಾಗಿ ಸರಕಾರಿ ಇಲಾಖೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ನೀಡುವ ಜಿಲ್ಲಾ ಮಟ್ಟದ ಈ ಪ್ರಶಸ್ತಿಗೆ ಸುಂದರ ಪೂಜಾರಿಯವರು ಪಾತ್ರರಾಗಿದ್ದಾರೆ. ಜ.26 ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರಶಸ್ತಿ ಪ್ರದಾನ ಮಾಡಿದರು.
ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮುಖ್ಯ ಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ, ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ಮತ್ತಿತರ ಗಣ್ಯರ ಸಮ್ಮುಖ ಅವರು ಈ ಪ್ರಶಸ್ತಿ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.