ಉಜಿರೆ: ಉಜಿರೆ ಗ್ರಾಮ ಪಂಚಾಯತದ 2018-19 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಸದಾಶಿವ ಯನೆ ಕೆ.ಶ್ರೀಧರ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.8 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಜಿ.ಪಂ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಚೆನ್ನಪ್ಪ ಮೊಯಿಲಿ ಸಭೆಯನ್ನು ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಕಾರ್ಯದರ್ಶಿ ಯಲ್ಲಮ್ಮ ವೈ. ಹಂಡಿ, ಗ್ರಾ.ಪಂ ಉಪಾಧ್ಯಕ್ಷೆ ವಿನುತಾ ರಜತ್ ಗೌಡ, ತಾ.ಪಂ.ಸದಸ್ಯ ಶಶಿಧರ ಎಂ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.