ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತದ 2018-19ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಗ್ರಾ.ಪಂ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಫೆ.16 ರಂದು ಗ್ರಾ.ಪಂ.ಸಭಾಭವನದಲ್ಲಿ ಜರುಗಿತುತು.
ಮಾರ್ಗದರ್ಶಿ ಅಧಿಕಾರಿಯಾಗಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೆಸರಿ ಯವರು ಸಭೆಯನ್ನು ನಡೆಸಿಕೊಟ್ಟರು.
ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯರಾದ ಮಮತಾ ಎಂ ಶೆಟ್ಟಿ, ತಾ.ಪಂ.ಸದಸ್ಯರಾದ ಗೋಪಿನಾಥ ನಾಯಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಪಿ.ಡಿ, ಕಾರ್ಯದರ್ಶಿ ಶ್ರೀಮತಿ ಸೇವಂತಿ, ಗ್ರಾ.ಪಂ ಉಪಾಧ್ಯಕ್ಷೆ ಅಕ್ಷತಾ ಕೆ. ಶೆಟ್ಟಿ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು, ಗ್ರಾ.ಪಂ. ಸಿಬ್ಬಂದಿ ವರ್ಗದವರು ಸಭೆಯಲ್ಲಿ ಭಾಗವಹಿಸಿದ್ದರು.