HomePage_Banner_
HomePage_Banner_
HomePage_Banner_

ಸಂತ ತೆರೇಸಾ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Advt_NewsUnder_1

ಬೆಳ್ತಂಗಡಿ :  ಸಂತ ತೆರೇಸಾ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಯಾಗಿ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕ ರಾದ ಶ್ರೀಯುತ ಕೇಶವ್ ಪೈ ಇವರು ನಡೆಸಿಕೊಟ್ಟರು. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ನಂತರ ಮುಂದೇನು ಎಂಬ ವೃತ್ತಿ ತರಬೇತಿ ಕಾರ್ಯಕ್ರಮ ಹಾಗೂ ಸೂಕ್ತ ಮಾರ್ಗದರ್ಶನ ಕಾರ್ಯಕ್ರಮವನ್ನು ಸುಮಾರು 156 ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ ನೀಡಿದರು. ಸಂತ ತೆರೇಸಾ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದರು  ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸಂತ ತೆರೇಸಾ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಶ್ರೀಯುತ ಶ್ರೀನಾಥ್ ಕೆ ಎಂ ಅವರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಶ್ರೀಲತಾ ಅತಿಥಿಗಳನ್ನು ಸ್ವಾಗತಿಸಿದರು ವಿದ್ಯಾರ್ಥಿನಿ ಕುಮಾರಿ ರಕ್ಷಾ ಧನ್ಯವಾದ ವಿತ್ತರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.