ಬಂದಾರು: ಪ್ರದಾನ್ ಮಂತ್ರಿ- ಕೃಷಿ ಸನ್ಮಾನ್ ಯೋಜನೆ ಮಾಹಿತಿ

ಬಂದಾರು : ಇಲ್ಲಿಯ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಪ್ರದಾನ  ಮಂತ್ರಿ ಕೃಷಿ ಸನ್ಮಾನ್ ಮಾಹಿತಿ ಕಾರ್ಯಾಗಾರ ಅಂಬೇಡ್ಕರ್ ಸಭಾಂಗಣದಲ್ಲಿ ಮಾ. 2 ರಂದು ನಡೆಯಿತು. ಬಂದಾರು ಪಂ. ಅಧ್ಯಕ್ಷ ಉದಯ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಆಧಿಕಾರಿ ಮೋಹನ್ ಬಂಗೇರ ಕಾರ್ಯಗಾರದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾ. ಪಂ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ, ಜನಾರ್ಧನ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ  ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲಾಯಿತು.   ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.