ಸ್ಕೌಟ್ಸ್-ಗೈಡ್ಸ್ ವತಿಯಿಂದ ಚಿಂತನಾ ದಿನಾಚರಣೆ

ಧರ್ಮಸ್ಥಳ: ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸ್ಕೌಟ್ಸ್-ಗೈಡ್ಸ್ ವತಿಯಿಂದ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಮ್.ವಿ ಯವರು ದೀಪ ಬೆಳಗಿಸಿ, ಬೇಡನ್ ಪವೆಲರ ಭಾವಚಿತ್ರಕ್ಕೆ ಹೂ ಸಮರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸ್ಕೌಟ್ ಚಳುವಳಿಗೆ ಸೇರಿದ ಬಳಿಕ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯಗಳು, ಶಿಸ್ತು ಪಾಲನೆಯ ಬಗ್ಗೆ ತಿಳಿ ಹೇಳಿದರು. ವೇದಿಕೆಯಲ್ಲಿ ಸ್ಕೌಟ್ ಮಾಸ್ಟರ್ ಶ್ರೀಮತಿ ಶಶಿಕಲಾ, ಗೈಡ್ ಕ್ಯಾಪ್ಟನ್ ಶ್ರೀಮತಿ ಗೀತಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಸೀದ ಮತ್ತು ನಿಶಾ ನಿರೂಪಿಸಿ, ಪವನ್ ಸ್ವಾಗತಿಸಿ, ನಿಶಿಕಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.