ಕೇಳ ಪಂಚಲಿಂಗೇಶ್ವರ ದೇವಸ್ಥಾನ: ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು: ಕಾಶಿಪಟ್ಣ ಕೇಳದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನೂತನ ಧ್ವಜಸ್ಥಂಬ, ರಥ ಸಮರ್ಪಣಾ ಕಾರ್ಯಕ್ರಮ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನದಲ್ಲಿ ಜರಗಿತು.
ಕೇಳ ಅರಮನೆಯ ವಿಕ್ರಮ್ ಕುಮಾರ್ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಪ್ರಧಾನ ಅರ್ಚಕ ಅನಂತ ಅಸ್ರಣ್ಣ, ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷ ಸತೀಶ್ ಕೆ., ವ್ಯವಸ್ಥಾಪನ ಸಮಿತಿಯ ಸದಸ್ಯರು, ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರುಗಳು, ಸೇವಾಪ್ರತಿನಿಧಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯ ಶಂಕರ ಭಟ್ ಬಾಲ್ಯ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.